ದಾವಣಗೆರೆ: ಟ್ರ್ಯಾಕ್ಟರ್ ಹರಿದ ಪರಿಣಾಮ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಚನ್ನಗಿರಿ (Channagiri) ತಾಲೂಕಿನ ದೊಡ್ಡೇರಿಕಟ್ಟೆ ಗ್ರಾಮದಲ್ಲಿ ನಡೆದಿದೆ. ನವೀನ್ ಎಚ್.ಟಿ (41) ಸಾವನ್ನಪ್ಪಿದ ರೈತ. ಈ ರೈತ ಕೆಳಗೆ ನಿಂತು ಟ್ರ್ಯಾಕ್ಟರ್ (Tractor) ಆನ್ ಮಾಡಿದ ಹಿನ್ನೆಲೆಯಲ್ಲಿ ಅವರ ಮೈಮೇಲೆ ಟ್ರ್ಯಾಕ್ಟರ್ ಹರಿದಿದೆ. ಪರಿಣಾಮ ರೈತ ಸ್ತಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಅಡಿಕೆಯನ್ನು ಸುಲಿಯುವ ಯಂತ್ರಕ್ಕೆ ಹಾಕುವ ಸಲುವಾಗಿ ಟ್ರ್ಯಾಕ್ಟರ್ ನಿಲ್ಲಿಸಿದ್ದರು. ನಂತರ ಕೆಳಗೆ ನಿಂತು ಟ್ರ್ಯಾಕ್ಟರ್ ಆನ್ ಮಾಡಿದ್ದಾರೆ. ಆ ಸಂದರ್ಭದಲ್ಲಿ ಮೈಮೇಲೆ ಹರಿದು ಸಾವನ್ನಪ್ಪಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.