ಹುಲಿ ಸೆರೆಗೆ ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ
1 min read
ಹುಲಿ ಸೆರೆಗೆ ಒತ್ತಾಯ : ಮಡಿಕೇರಿಯಲ್ಲಿ ಪ್ರತಿಭಟನೆ
ಕೊಡಗು : ಹುಲಿ ಸೆರೆಗೆ ಆಗ್ರಹಿಸಿ ದಕ್ಷಿಣ ಕೊಡಗಿನ ರೈತರು ,ಬೆಳೆಗಾರರು ಬಂದಾ,ಅಹೋರಾತ್ರಿ ಪ್ರತಿಭಟನೆ ಬಳಿಕ ಇಂದು ಮಡಿಕೇರಿಯಲ್ಲಿ ರೈತ ಸಂಘಟನೆಗಳು ಬೃಹತ್ ವಾಹನ ಜಾಥಾ ಮೂಲಕ ಜಿಲ್ಲಾಡಳಿತ ಸೂಕ್ತ ಕ್ರಮಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದವು.
ನಿರಂತರ ಕಾಡು ಪ್ರಾಣಿಗಳ ಹಾವಳಿಯಿಂದ ಜಿಲ್ಲೆಯ ಜನರು ತತ್ತರಿಸಿದ್ದಾರೆ. ಇದರ ಮಧ್ಯೆ ಹುಲಿ ಉಪಟಳದಿಂದ ಜನರು ಆತಂಕಕ್ಕೀಡಾಗಿದ್ದು, ಹುಲಿನ್ನ ಸೆರೆ ಹಿಡಿಯಬೇಕೆಂದು ಹೆದ್ದಾರಿ 274ನಲ್ಲಿರುವ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಒಂದುಗಂಟೆಗಳ ಹೆಚ್ಚು ಕಾಲ ಮಾನವ ಸರಪಳಿ ನಿರ್ಮಾಣ ಮಾಡುವ ಒತ್ತಾಯಿಸಿದ್ರು.
ಇದರಿಂದ ಮೈಸೂರು ಮತ್ತು ಮಂಗಳೂರು ಕಡೆಗೆ ತೆರಳುವ ನೂರಾರು ವಾಹನಗಳು ಟ್ರಾಫಿಕ್ ಜಾಮ್ ಸಮಸ್ಯೆ ಎದುರಿಸಬೇಕಾಯಿತು.
ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ಜಾಥಾ ಮೂಲಕ ತೆರಳಿದ ಪ್ರತಿಭಟನಾಕಾರರು ರೈತ ಸಂಘದ ಜಿಲ್ಲಾಧ್ಯಕ್ಷ ಮನುಸೋಮಯ್ಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ರೈತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅರಿವು ಮೂಡಿಸಿ ಸರ್ಕಾರಕ್ಕೆ ಸೂಕ್ತ ಮಾಹಿತಿ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.
