ಉಡುಪಿ : ಸಾಲದ ಶೂಲಕ್ಕೆ ರೈತ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 58 ವರ್ಷದ ಗುಂಡು ನಾಯ್ಕ್ ಮೃತ ರೈತನಾಗಿದ್ದು, ಈತನನ್ನು ಪೆರ್ಡೂರು ಗ್ರಾಮದ ಮೂಡು ಜೆಡ್ಡು ನಿವಾಸಿ ಎನ್ನಲಾಗಿದೆ. ಮೃತ ಗುಂಡು ನಾಯ್ಕ್ ಕೃಷಿಗಾಗಿ ಸಾಲ ಮಾಡಿಕೊಂಡಿದ್ದರಂತೆ. ಆದ್ರೆ ಬೆಳೆ ಕೈಕೊಟ್ಟ ಕಾರಣ ಸಾಲ ತೀರಿಸಲಾಗದೆ ಮನನೊಂದು ಫೆ.28ರಂದು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ರು. ಕೂಡಲೇ ಇವರನ್ನು ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದಾರೆ. ಈ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Astro- ನಾಡದೇವತೆ ಶ್ರೀ ಚಾಮುಂಡೇಶ್ವರೀ ಅಮ್ಮನವರ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, 04/08/2026 ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ 8548998564 ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ...








