ಫಲಾನಭವಿ ರೈತರು ಕೇಂದ್ರದ ಯೋಜನೆಗಳಿಗೆ ರಾಯಭಾರಿಗಳಂತೆ ಕಾರ್ಯ ನಿರ್ವಹಿಸಬೇಕು – ಕೇಂದ್ರ ಕೃಷಿ ಸಚಿವರು
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಿಂದ ರೈತರು ಪ್ರಯೋಜನ ಪಡೆದಿದ್ದಾರೆ ಮತ್ತು ಹೆಚ್ಚಿನ ಸಂಖ್ಯೆಯ ರೈತರು ಈ ಯೋಜನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬುಧವಾರ ಹೇಳಿದ್ದಾರೆ.
ಆಜಾದಿ ಕಿ ಅಮೃತ್ ಮಹೋತ್ಸವದ ಅಡಿಯಲ್ಲಿ ನಡೆಯುತ್ತಿರುವ ರೈತರ ಸಹಭಾಗಿತ್ವ ನಮ್ಮ ಆದ್ಯತೆ. ಅಭಿಯಾನದ ಅಂಗವಾಗಿ, ತೋಮರ್ ಅವರು ಬುಧವಾರ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಶೇಷ ‘ಫಸಲ್ ಬಿಮಾ ಪಾಠಶಾಲಾ’ ಅಭಿಯಾನದಲ್ಲಿ ಭಾಗವಹಿಸಿದರು. ವಿಶೇಷ ಕಾರ್ಯಕ್ರಮದಲ್ಲಿ ದೇಶದ ವಿವಿಧೆಡೆಯಿಂದ ಒಂದು ಕೋಟಿಗೂ ಹೆಚ್ಚು ರೈತರು ಪಾಲ್ಗೊಂಡಿದ್ದರು. ದೇಶದಾದ್ಯಂತ ರೈತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಫಸಲ್ ಬಿಮಾ ಯೋಜನೆಯಡಿ 2016 ರಿಂದ 2021 ರ ಖಾರಿಫ್ ವರೆಗೆ ಪ್ರತಿ ವರ್ಷ ಸುಮಾರು 5.5 ಕೋಟಿ ರೈತರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ್ದಾರೆ ಮತ್ತು ಇಲ್ಲಿಯವರೆಗೆ ಸುಮಾರು 21 ಸಾವಿರ ಕೋಟಿ ಪ್ರೀಮಿಯಂ ಸಂಗ್ರಹಿಸಲಾಗಿದೆ ಮತ್ತು ರೈತರು 1.15 ಲಕ್ಷಕ್ಕೂ ಹೆಚ್ಚು ಪಡೆದಿದ್ದಾರೆ ಎಂದು ತಿಳಿಸಿದರು.
ವಿವಿಧ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟದ ವಿರುದ್ಧ ದೇಶದ ರೈತರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಹ ರೈತರನ್ನು ಪ್ರೇರೇಪಿಸಲು ಫಲಾನುಭವಿ ರೈತರು ರಾಯಭಾರಿಗಳಾಗಿ ಕಾರ್ಯನಿರ್ವಹಿಸಬೇಕೆಂದು ಅವರು ಹೇಳಿದರು.








