ರಾಜ್ಯ : ಮಹದಾಯಿ, ಕಳಸಾ ಬಂಡೂರಿ ವಿಷಯದಲ್ಲಿ ರಾಜಕೀಯ ಮಾಡದೆ, ಪ್ರಾಮಾಣಿಕವಾಗಿ ನಮಗೆ ನೀರು ಒದಗಿಸಬೇಕೆಂದು ಆಗ್ರಹಿಸಿ ರೈತರು ಪಾದಯಾತ್ರೆ ನಡೆಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಪ್ರಹ್ಲಾದ್ ಜೋಶಿ, ಮಹದಾಯಿಗಾಗಿ 100 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ. ಈಗಾಗಲೇ ಮಹದಾಯಿ ಪ್ರಾಜೆಕ್ಟ್ ಸಿದ್ಧಪಡಿಸಿದ್ದೇವೆ ಎಂದು ಹೇಳಿದ್ದರು. ಆದರೆ, ಈಗ ಇಲ್ಲಸಲ್ಲದ ಕಾರಣ ನೀಡಿ ಯೋಜನೆ ಜಾರಿಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮಹದಾಯಿ ವಿಚಾರದಲ್ಲಿ ಮಲತಾಯಿ ಧೋರಣೆ ತೋರಬೇಡಿ. ವನ್ಯಜೀವಿ ಪ್ರಾಧಿಕಾರ ಕೇಂದ್ರದ ಕೈಯಲ್ಲಿದೆ. ಹೀಗಾಗಿ ಯೋಜನೆ ಜಾರಿಗೆ ತರಬೇಕು. ರಾಜ್ಯ ಸರ್ಕಾರ ಕೂಡ ಸುಪ್ರೀಂಕೋರ್ಟ್ ಗೆ ಸೂಕ್ತವಾದ ವಕೀಲರನ್ನು ನೇಮಕ ಮಾಡಬೇಕು. ಈ ಭಾಗದ ಸಂಸದರು ಯಾವುದೇ ಕಾರಣಕ್ಕೆ ರಾಜಕೀಯ ಮಾಡದೆ, ಯೋಜನೆ ಜಾರಿಗೆ ಒಂದಾಗಿ ಪ್ರಯತ್ನಿಸಬೇಕು.
ಕೇಂದ್ರದ ಪ್ರಭಾವಿ ಸಚಿವರು ಪ್ರಹ್ಲಾದ್ ಜೋಶಿ ಮಹದಾಯಿ ಯೋಜನೆ ಜಾರಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ರೈತರು ಈ ವೇಳೆ ಆಗ್ರಹಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿದ್ದರು.