Delhi Jantar Mantar : ದೆಹಲಿಯಲ್ಲಿ ರೈತರ ಮಹಾಪಂಚಾಯತ್ – ದೆಹಲಿ ಗಡಿಯಲ್ಲಿ ಹೆಚ್ಚಿದ ಭದ್ರತೆ..
ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯ ವಿರುದ್ಧ ಪ್ರತಿಭಟಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಮತ್ತು ಇತರ ರೈತರ ಗುಂಪುಗಳು ಇಂದು ಜಂತರ್ ಮಂತರ್ನಲ್ಲಿ ಒಂದಾಗುತ್ತಿವೆ.
ಪ್ರತಿಭಟನೆ ನಿಯಂತ್ರಿಸಲು ದೆಹಲಿ ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್ಗಳನ್ನು ಹಾಕಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಣದಲ್ಲಿಡಲು ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಭಾರಿ ಭದ್ರತೆಯೂ ನಡುವೆಯೂ ರೈತರು ಜಂಥರ್ ಮಂಥರ್ ಗೆ ಧಾವಿಸುತ್ತಿದ್ದಾರೆ.
ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದ್ದು, ಗಾಜಿಪುರ, ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಪೊಲೀಸರು ಬಿಗಿಭದ್ರತೆ ಕೈಗೊಂಡಿದ್ದಾರೆ.
ಇದಕ್ಕೂ ಮುನ್ನ ಭಾನುವಾರ ದೇಶದಲ್ಲಿನ ನಿರುದ್ಯೋಗ ಸಮಸ್ಯೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಲು ಜಂತರ್ ಮಂತರ್ಗೆ ತೆರಳುತ್ತಿದ್ದ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಗಾಜಿಪುರ ಗಡಿಯಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ.