ಬೆಳಗಾವಿ: ಕರ್ನಾಟಕಕ್ಕೆ ಸೇರಿಸಿಕೊಳ್ಳುವಂತೆ ಮಹಾರಾಷ್ಟ್ರದ ಜತ್ತ ತಾಲೂಕಿನ ರೈತ ಮುಖಂಡರ ನಿಯೋಗವು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ನೀರಾವರಿ ಭರವಸೆ ನೀಡಿದರೆ ಕರ್ನಾಟಕಕ್ಕೆ ಸೇರಲು ಸಿದ್ಧ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಮಹಾರಾಷ್ಟ್ರದ ಗಡಿ ಗ್ರಾಮಗಳ ಹೊಲಗಳಿಗೆ ರಾಜ್ಯದ ನೀರಾವರಿ ಯೋಜನೆಗಳಿಂದ ನೀರು ಬಿಡುವಂತೆ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಜತ್ತ ತಾಲೂಕಿನ ಸುಮಾರು 40 ಗ್ರಾಮಗಳು ತೀವ್ರ ನೀರಿನ ಕೊರತೆಯಿಂದ ಬಳಲುತ್ತಿವೆ.
ಬಿಕ್ಕಟ್ಟಿಗೆ ಶಾಶ್ವತ ಪರಿಹಾರ ಕೈಗೊಳ್ಳುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದರೆ, ಅವರು ನಿರ್ಲಕ್ಷ್ಯ ವಹಿಸಿದ್ದಾರೆ. ಆದರೆ, ಅವರು ತಲೆ ಕೆಡಿಸಿಕೊಳ್ಳುತ್ತಿಲ್ಲ. ನೀವು ಬರದ ಬವಣೆ ನೀಗಿಸಿದರೆ ನಾವು ನಿಮ್ಮ ರಾಜ್ಯ ಸೇರುತ್ತೇವೆ ಎಂದು ಹೇಳಿದ್ದಾರೆ.