ನಾಳೆ ಸುವರ್ಣಸೌಧಕ್ಕೆ ರೈತ ಸಂಘ ಮುತ್ತಿಗೆ Farmers’ Union saaksha tv
ಬೆಳಗಾವಿ : ಕೇಂದ್ರ ಸರಕಾರದಂತೆ ರಾಜ್ಯ ಬಿಜೆಪಿ ಸರಕಾರವೂ ಕೂಡ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ನಾಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಜಾರಿ ಮಾಡಿದ್ದ ರೈತ ವಿರೋಧಿ ಕೃಷಿ ಕಾಯ್ದೆಗಳನ್ನ ರಾಜ್ಯದಲ್ಲೂ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ಮಾಡಲಾಗಿತ್ತು. ಇದೀಗ ರೈತರ ಹೋರಾಟದ ಫಲವಾಗಿ ಕೇಂದ್ರ ಸರ್ಕಾರವೇ ಕೃಷಿಗಳನ್ನು ವಾಪಸ್ ಪಡೆದಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ ಕೇಂದ್ರ ಸರ್ಕಾರ ಕೃಷಿ ಮಸೂದೆಯನ್ನು ವಾಪಸ್ ಪಡೆದರೆ, ಕರ್ನಾಟಕ ಸರ್ಕಾರ ವಾಪಸ್ ಪಡೆಯಬೇಕು ಎಂಬ ಕಾನೂನು ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಕಿಡಿಕಾರಿದ ಚಂದ್ರಶೇಖರ್, ಈ ಮೊದಲು ಬಿಜೆಪಿ, ರೈತರ ಸರ್ಕಾರ ಅಂದುಕೊಂಡು ಇದೀಗ ರೈತರ ಹಿತಾಸಕ್ತಿಯನ್ನು ಮರೆತಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯವಾಗಿ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಒಂದು ವೇಳೆ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ರೆ ಇಡೀ ರಾಜ್ಯದಲ್ಲಿ ರೈತರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.