ಚಾಮರಾಜನಗರ : ನೂತನ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಗೆ ಕಪ್ಪು ಪಟ್ಟಿ ಪ್ರದರ್ಶಿಸಲು ಯತ್ನಿಸಿದ 15 ಮಂದಿ ರೈತರನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರಪೇಟೆಯ ಬಳಿ ರೈತ ಸಂಘದ ಗುರುಪ್ರಸಾದ್ ಮತ್ತು ಸಹ ಕಾರ್ಯಕರ್ತರು ರಸ್ತೆ ವಿಭಜಕದ ಮೇಲೆ ನಿಂತು ಸುರೇಶ್ ಕುಮಾರ್ ಗೆ ಕಪ್ಪು ಬಾವುಟ ಪ್ರದರ್ಶಿಸಿ, ಧಿಕ್ಕಾರದ ಘೋಷಣೆಗಳನ್ನು ಕೂಗಿದ್ದಾರೆ. ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವರಾಗಲು ಸುರೇಶ್ ಕುಮಾರ್ ನಾಲಾಯಕ್. ಕೂಡಲೇ ಅವರು ರಾಜೀನಾಮೆ ನೀಡಬೇಕೆಂದು ರೈತ ಸಂಘದ ಮುಖಂಡರು ಆಗ್ರಹಿಸಿದ್ದಾರೆ.
ಇನ್ನು ನಗರದ ಭುವನೇಶ್ವರಿ ವೃತ್ತದ್ದಲ್ಲಿ ಉಗ್ರವಾಗಿ ಪ್ರತಿಭಟಿಸಿ ಸಚಿವರಿಗೆ ಮುತ್ತಿಗೆ ಹಾಕಲು ರೈತರು ನಿರ್ಧರಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ರೈತ ಸಂಘದ ಹೊನ್ನೂರು ಪ್ರಕಾಶ್, ಗುರುಪ್ರಸಾದ್, ಕಡಬೂರು ಮಂಜುನಾಥ್ ಸೇರಿದಂತೆ 15ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಬಂಧನದಲ್ಲಿರುವ ರೈತರು ಸಚಿವ ಸುರೇಶ್ ಕುಮಾರ್ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಅಲ್ಲದೆ ಸುರೇಶ್ ಕುಮಾರ್ ಎಂಟು ತಿಂಗಳ ಯಿಂದ ರೈತರ ಸಭೆ ಕರೆದಿಲ್ಲ. ಕಮಿಷನ್ ಯಾವುದರಲ್ಲಿ ಸಿಗುತೋ ಅದರ ಸಭೆ ನಡೆಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.