ಮೈಸೂರು: ಭೂಸ್ವಾಧೀನ ಕಾಯ್ದೆ ವಿರುದ್ದ ರೈತ ಸಂಘಗಳು ಪ್ರತಿಭಟನೆ ನಡೆಸುತ್ತಿವೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ರೈತ ಸಂಘಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ಇಂದು ಮೈಸೂರಿನಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ಹೋರಾಟ ನಡೆಸಲಾಯಿತು.
ನ್ಯಾಯಾಲಯದ ಮುಂಭಾಗದ ಗಾಂಧಿ ಪ್ರತಿಮೆ ಮುಂದೆ, ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘ ಹಾಗೂ ಹಸಿರು ಸೇನೆಯ ರಾಜಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ಇತರೆ ಮುಖಂಡರು ಕರಡು ಪ್ರತಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು.
ಬಳಿಕ ಮಾತನಾಡಿದ ಅವರು. ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೆ ಹೋದರೆ ಜೂನ್ 15 ರಂದು ಬೆಳಿಗ್ಗೆ 11 ರಿಂದ 11 ಗಂಟೆಯವರೆಗೆ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾದದಲ್ಲಿ ಪ್ರತಿಭಟನೆ ಮಾಡಲಾಗುವುದು .
ಅಲ್ಲದೆ ಜೂನ್ 27 ರಿಂದ 30 ರವರೆಗೂ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಬೇರೆ ಬೇರೆ ಸಂಘಟನೆಗಳ ಕಾರ್ಯಕರ್ತರು ರಾಜ್ಯದ ಎಲ್ಲಾ ಪಂಚಾಯತಿ ಕಚೇರಿಗಳ ಮುಂದೆ ಪ್ರತಿಭಟನೆ ಮಾಡಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.








