ಜುಲೈ 22 ರಂದು ಪಾರ್ಲಿಮೆಂಟ್ ಮುಂದೆ `ರೈತ ಕಹಳೆ’ farmers
ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರ ಪ್ರತಿಭಟನೆ ಮುಂದುವರೆದಿದೆ.
ಅದರ ಮುಂದುವರೆದ ಭಾಗವಾಗಿ ಜುಲೈ 22ರಿಂದ ಪಾರ್ಲಿಮೆಂಟ್ ನ ಹೊರಗೆ ಪ್ರತಿಭಟನೆ ನಡೆಸಲು ಭಾರತೀಯ ಕಿಸಾನ್ ಯೂನಿಯನ್ ನಿರ್ಧಾರಿಸಿದೆ.
ಇದರಲ್ಲಿ ಸುಮಾರು 200 ರೈತರು ಭಾಗಿಯಾಗಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಕಾನೂನುಗಳ ಬಗ್ಗೆ ಕೇಂದ್ರ ಸರ್ಕಾರವು ಚರ್ಚೆಯನ್ನು ಬಯಸಿದರೆ, ನಾವು ಮಾತುಕತೆಗೆ ಸಿದ್ಧರಿದ್ದೇವೆ.
ಆದರೆ, ಮಾತುಕತೆಗಳು ನಡೆಯದಿದ್ದರೆ ಜುಲೈ 22ರಿಂದ ಸುಮಾರು 200 ರೈತರು ಸಂಸತ್ತಿನ ಬಳಿ ಪ್ರತಿಭಟನೆ ನಡೆಸುತ್ತೇವೆ ಎಂದು ಸ್ಪಷ್ಟಡಿಸಿದರು.
ಇನ್ನು ಕೃಷಿ ಮಸೂದೆಗಳಿಗೆ ಸಂಬಂಧಿಸಿದಂತೆ ಗುರುವಾರ ಮಾತನಾಡಿದ್ದ ಸಚಿವ ನರೇಂದ್ರ ಸಿಂಗ್ ತೋಮರ್, ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದರು.