ಮೈಸೂರು: ಕೆಎಸ್ಆರ್ಟಿಸಿ ಬಸ್ ಅಡ್ಡಟ್ಟಿ ಚಾಲಕನ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬೋಳನಹಳ್ಳಿಯಲ್ಲಿ ನಡೆದಿದೆ.

ಪಿರಿಯಾಪಟ್ಟಣ depo ಚಾಲಕ ವೆಂಕಟೇಶ್ಗೆ ಗಂಭೀರ ಗಾಯಗಳಾಗಿದ್ದು, ಮೈಸೂರಿನ ಗೊಪಾಲಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರು ಕಡೆಯಿಂದ ಹಾಸನ ಕಡೆಗೆ ಪಿರಿಯಾಪಟ್ಟಣ ಘಟಕಕ್ಕೆ ಸೇರಿದ ಕೆಎಸ್ಆರ್ಟಿಸಿ ಬಸ್ ಹುಣಸೂರು ತಾಲೂಕು ಹೊಸರಾಮೇನಹಳ್ಳಿ ಬಳಿ ಹೋಗುತ್ತಿತ್ತು. ರಸ್ತೆ ಮಧ್ಯಕ್ಕೆ ಹಸುಗಳು ಬಂದಿದ್ದರಿಂದ ಚಾಲಕ ಬಸ್ನ್ನು ಸ್ವಲ್ಪ ಬಲಭಾಗಕ್ಕೆ ತಿರಿಗಿಸಿದ್ದಾರೆ. ಈ ವೇಳೆ ಕೆ.ಆರ್ ನಗರ ಕಡೆಯಿಂದ ಮೈಸೂರು ಕಡೆಗೆ ಪಲ್ಸರ್ ಬೈಕ್ನಲ್ಲಿ ಬರುತ್ತಿದ್ದ ಮೂವರು ಯುವಕರು ಬಸ್ ಚಾಲಕ ತಮಗೆ ಡಿಕ್ಕಿ ಹೊಡೆದಲೆಂದೇ ಬಲಕ್ಕೆ ತಿರುಗಿಸಿದ ಎಂದು ಬಸ್ಸನ್ನು ಅಡ್ಡಗಟ್ಟಿ ಚಾಲಕ-ನಿರ್ವಾಹಕರ ಜೊತೆ ಜಗಳಕ್ಕೆ ನಿಂತಿದ್ದಾರೆ.

ಜಗಳ ತಾರಕಕ್ಕೇರಿ ಪರಸ್ಪರ ಹೊಡೆದಾಟದಿಂದ ತಾರಕಕ್ಕೇರಿದೆ. ಮೂವರ ಪೈಕಿ ಒರ್ವ ಯುವಕ ತನ್ನ ಬಳಿ ಇರಿಸಿಕೊಂಡಿದ್ದ ಚಾಕುವಿನಿಂದ ಚಾಲಕ ವೆಂಕಟೇಶ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಜನಸಂದಣಿ ಹೆಚ್ಚಾಗುತ್ತಿದ್ದಂತೆ ಅಲ್ಲಿಂದ ಮೂವರು ಯುವಕರು ಬೈಕ್ ನಲ್ಲಿ ಮೈಸೂರು ಕಡೆಗೆ ಪರಾರಿಯಾಗಿದ್ದಾರೆ.

ಬಸ್ ನಿರ್ವಾಹಕ ಹರೀಶ್ ನೀಡಿದ ದೂರಿನ ಆಧಾರದ ಮೇಲೆ ಬಿಳಿಕೆರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ವ್ಯಾಪಕ ಬಲೆ ಬೀಸಿದ್ದಾರೆ ಎಂದು ಡಿವೈಎಸ್ ಪಿ ರವಿಪ್ರಸಾದ್ ತಿಳಿಸಿದ್ದಾರೆ.
ಚಾಲಕನಿಗೆ ಚಾಕುವಿನಿಂದ ಇರಿಯುತ್ತಿರುವ ದೃಷ್ಯವನ್ನು ವಿಡಿಯೋ ಮಾಡಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








