ಕಲಬುರಗಿ: ಬಿಜೆಪಿ ಮುಖಂಡನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ (Manikanta Rathod) ಮೇಲೆಯೇ ಹಲ್ಲೆ ನಡೆದಿದ್ದು, ಚಿತ್ತಾಪುರದಿಂದ ಕಲಬುರಗಿಗೆ ಹೋಗುತ್ತಿರುವ ಸಂದರ್ಭದಲ್ಲಿ ಶಹಾಬಾದ್ ಹತ್ತಿರ ಅಪರಿಚಿತರು ದಾಳಿ ನಡೆಸಿದ್ದಾರೆ.
ಹಲ್ಲೆಗೆ ಒಳಗಾದ ಮಣಿಕಂಠ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪೂರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಅವರು ತೆರಳುತ್ತಿದ್ದ ವಾಹನ ತಡೆದ ದುಷ್ಕರ್ಮಿಗಳು ಬಿಯರ್ ಬಾಟಲ್ ಗಳಿಂದ ತಲೆಗೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ರಾಠೋಡ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.