ಕೋಲಾರ: ಬಸ್ ಹಾಗೂ ಟ್ರಕ್ ಮಧ್ಯೆ ಭೀಕರ ರಸ್ತೆ ಅಪಘಾತವೊಂದು ನಡೆದಿದ್ದು, 8 ಜನ ಸಾವನ್ನಪ್ಪಿ, 30ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಕೋಲಾರ (Kolar) ಜಿಲ್ಲೆಯ ಗಡಿ ರಾಜ್ಯ ಆಂಧ್ರಪ್ರದೇಶದ (Andrapradesh) ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಕಂಟೈನರ್ ಟ್ರಕ್ ಮತ್ತು ಆಂಧ್ರ ಸಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಈ ಘಟನೆ ನಡೆದಿದೆ. ಘಟನೆಯಲ್ಲಿ ಬಸ್ ಸಂಪೂರ್ಣ ಹಾನಿಯಾಗಿದೆ. ಹೀಗಾಗಿ ಬಸ್ ನಲ್ಲಿದ್ದ 8 ಜನ ಸಾವನ್ನಪ್ಪಿದ್ದಾರೆ. 30ಕ್ಕೂ ಅಧಿಕ ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಆಂಧ್ರ ಪೊಲೀಸರು ಭೇಟಿ ನೀಡಿದ್ದಾರೆ. ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.