ತನ್ನ ಮಗುವಿನೊಂದಿಗೆ ತಂದೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಅಮಾನುಷ ಘಟನೆ ನೇತ್ರಾವತಿ ನದಿ ಸೇತುವೆ ಬಳಿ ನಡೆದಿದೆ. ಗೋಪಾಲಕೃಷ್ಣ ರೈ (45) ಮತ್ತು ಮಗ ನಮೀಶ್ ರೈ (6) ಶವವಾಗಿ ಕಂಡು ಬಂದಿದ್ದು, ಸಾವಿಗೆ ನಿಖರವಾದ ಕಾರಣ ಕಂಡು ಬಂದಿಲ್ಲ.ಇನ್ನು ಮೃತರು ಮೂಲತಃ ಬಂಟ್ವಾಳದ ಬಾಳ್ತಿಲ ನಿವಾಸಿಗಳೆಂದು ತಿಳಿದು ಬಂದಿದೆ. ಗೋಪಾಲಕೃಷ್ಣ ರೈ ಅವರ ಕಾರು ಉಳ್ಳಾಲ ನೇತ್ರಾವತಿ ನದಿ ಸೇತುವೆ ಬಳಿ ಪತ್ತೆಯಾಗಿದ್ದು, ಮಹಾರಾಷ್ಟ್ರ ನೋಂದಣಿಯ ಈ ಕಾರಿನಲ್ಲಿ ಯಾರು ಇಲ್ಲದ್ದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರ ಪರಿಶೀಲನೆ ನಂತರ ಈ ದುರ್ಘಟನೆ ಬೆಳಕಿಗೆ ಬಂದಿದೆ.
ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ
ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...








