ಚಿಕ್ಕೋಡಿ: ಮೀನು ಹಿಡಿಯುವುದಕ್ಕಾಗಿ ಘಟಪ್ರಭಾ ಹಿನ್ನೀರಿಗೆ ಇಳಿದಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ನಡೆದಿದೆ.
ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಬೆನಕನಹೊಳಿ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ತಂದೆ ಲಕ್ಷ್ಮಣ ರಾಮಾ ಅಂಬಲಿ(46), ಮಕ್ಕಳಾದ ರಮೇಶ(15), ಯಲ್ಲಪ್ಪ(13) ಘಟಪ್ರಭಾ ನದಿಯಲ್ಲಿ ನಾಪತ್ತೆಯಾಗಿ ಸಾವನ್ನಪ್ಪಿರುವ ದುರ್ದೈವಿಗಳು. ಗ್ರಾಮದ ಲಕ್ಷ್ಮಣ ಮೀನುಗಾರಿಕೆ (Fishing) ಮಾಡುತ್ತಿದ್ದರು. ಹೀಗಾಗಿ ಅವರು ತಮ್ಮ ಇಬ್ಬರು ಮಕ್ಕಳೊಂದಿಗೆ ಮೀನು ಹಿಡಿಯಲು ತೆರಳಿದ್ದರು. ಆದರೆ, ಈ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿಸಿದ್ದಾರೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.