ಬೆಳಗಾವಿ: ಮನೆಬಿಟ್ಟು ಹೋಗಿದ್ದ ಪತ್ನಿಯನ್ನು ಕರೆತರಲು ಹೋದ ವೇಳೆ ಅವಮಾನ ಮಾಡಿದರು ಎಂಬ ಕಾರಣಕ್ಕೆ ಇಬ್ಬರು ಮಕ್ಕಳಿಗೆ ವಿಷವುಣಿಸಿದ ತಂದೆ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಾದಗೂಡು ಗ್ರಾಮದಲ್ಲಿ ನಡೆದಿದೆ.
ಮಕ್ಕಳಾದ ಚಿನ್ನು (2), ನಿರಂಜನ್ (10)ಗೆ ಊಟದಲ್ಲಿ ವಿಷ ಬೆರೆಸಿ ತಿನ್ನಿಸಿದ ತಮ್ಮಣ್ಣ ಗಿಡ್ಡಾಳೆ (35), ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಮ್ಮಣ್ಣ ಅವರ ಪತ್ನಿ ಕೌಟುಂಬಿಕ ಕಲಹ ನಡೆದ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳನ್ನು ಬಿಟ್ಟು ತವರಿಗೆ ಹೋಗಿದ್ದರು. ಪತ್ನಿಯ ಮನವೊಲಿಸಲು ತಮ್ಮಣ್ಣ ನಿನ್ನೆ ಹೆಂಡತಿಯ ತವರು ಮನೆ ಹುಕ್ಕೇರಿ ತಾಲೂಕಿನ ಕೇಸ್ತಿ ಗ್ರಾಮಕ್ಕೆ ಹೋಗಿದ್ದರು.
ಈ ಸಂದರ್ಭದಲ್ಲಿ ಪತ್ನಿಯ ತವರು ಮನೆಯವರು ತಮ್ಮಣ್ಣನನ್ನು ಅವಮಾನ ಮಾಡಿ ಕಳಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾತ್ರಿ ತಾನೂ ವಿಷ ಕುಡಿದು ಮಕ್ಕಳಿಗೂ ಉಣಿಸಿ ತಮ್ಮಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಹುಕ್ಕೇರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.