ಕೊಡಲಿಯಿಂದ ಕೊಚ್ಚಿ ತಂದೆಯನ್ನೆ ಹತ್ಯೆಗೈದ ಪುತ್ರ…
ತಂದೆ ದಿನವೂ ಕುಡಿದು ಬಂದು ಗಲಾಟೆ ಮಾಡುತ್ತಾರೆ ಎನ್ನುವ ಕಾರಣಕ್ಕೆ ರೋಸಿ ಹೊಗಿದ್ದ ಅಪ್ರಾಪ್ತ ಬಾಲಕನೊಬ್ಬ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಮೃತ ತಂದೆಯನ್ನ ಪುಂಡಲೀಕ (43) ಎಂದು ಗುರುತಿಸಲಾಗಿದೆ. ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತಿದ್ದ ತಂದೆಯಿಂದ ರೋಸಿ ಹೋಗಿದ್ದ ಮಗ, ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
16 ವರ್ಷದ ಅಪ್ರಾಪ್ತ ಬಾಲಕ ಕೆಲ ದಿನಗಳ ಹಿಂದೆಯಷ್ಟೆ ತಂದೆಯ ಜೊತೆ ಜಗಳ ಮಾಡಿಕೊಂಡಿದ್ದ. ಆದರೂ ತಂದೆ ಕುಡಿದು ಬಂದು ಗಲಾಟೆ ಮಾಡಲು ಶುರು ಮಾಡಿದಾಗ ರೋಸಿ ಹೋಗಿ ಮನೆ ಮುಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದಾನೆ.
ಘಟನಾ ಸ್ಥಳಕ್ಕೆ ಗರಗ ಪೊಲೀಸರು ಬೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.








