12 ಸಾವಿರ ರೂ ಹಣ ಕಳೆದುಕೊಂಡಿದ್ದಕ್ಕೆ ಮಗನನ್ನೆ ಬೆಂಕಿ ಹಚ್ಚಿ ಕೊಂದ ತಂದೆ
12 ಸಾವಿರ ರೂ. ಹಣ ಕಳೆದುಕೊಂಡಿದ್ದಕ್ಕೆ ಸ್ವಂತ ಮಗನನ್ನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಅಮಾನವೀಯ ಘಟನೆಯೊಂದು ಬೆಂಗಳೂರಿನ ಆಜಾದ್ ನಗರದಲ್ಲಿ ನಡೆದಿದೆ.
ಬೆಂಗಳೂರಿನ ನಿವಾಸಿ ಸುರೇಂದ್ರ ಎಂಬವರೇ ತಮ್ಮ ಮಗ ಅರ್ಪಿತ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಅಮಾನವೀಯ ಘಟನೆಯ ದೃಶ್ಯವು ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಕಳೆದ ವಾರ ಅರ್ಪಿತ್ 12 ಸಾವಿರ ರೂ. ಕಳೆದುಕೊಂಡಿದ್ದಕ್ಕೆ ಸುರೇಂದ್ರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ದೇಹದ ಬಹುಪಾಲು ಭಾಗ ಸುಟ್ಟುಹೋಗಿತ್ತು ಎನ್ನಲಾಗಿದೆ.
ಅರ್ಪಿತ್ನನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ನರಳಿ ಇಂದು ಮೃತಪಟ್ದಿದಾರೆ.
Father kills his own son in the middle of a road for 12,000 Rs in Bangalore