ಇಬ್ಬರು ಹೆಣ್ಣು ಮಕ್ಕಳ ಮುಂದೆಯೇ ತಂದೆಯ ಬರ್ಭರ ಹತ್ಯೆ-ಬೆಚ್ಚಿದ ಸಿಲಿಕಾನ್ ಸಿಟಿ
ತಡ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇಬ್ಬರು ಹೆಣ್ಣು ಮಕ್ಕಳ ಮುಂದೆಯೇ ತಂದೆಯನ್ನ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂಟೌನ್ ನಲ್ಲಿ ನಡೆದಿದೆ.
ಬೆಂಗಳೂರಿನ ಜಿಕೆವಿಕೆ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ದೀಪಕ್ ಕುಮಾರ್ ಕೊಲೆಯಾದ ದುರ್ದೈವಿ. 46 ವರ್ಷದ ದೀಪಕ್ ಕುಮಾರ್ ಮುಲತಃ ಬಿಹಾರದವರಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದರು.
ನಿನ್ನೆ ರಾತ್ರಿ 1.30 ಕ್ಕೆ ಏಕಾ ಏಕಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಇಬ್ಬರು ಹೆಣ್ಣು ಮಕ್ಕಳ ಮುಂದೆಯೇ ದೀಪಕ್ ಕುಮಾರ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಹೆಣ್ಣು ಮಕ್ಕಳ ಕುತ್ತಿಗೆಯ ಮೇಲು ಲಾಂಗ್ ಇಟ್ಟು ವಿಷಯವನ್ನ ಎಲ್ಲೂ ಹೇಳದಂತೆ ಬೆದರಿಕೆ ಹಾಕಿದ್ದಾರೆ.
ಸ್ಥಳಿಯರ ದೂರಿನ ಮೇಲೆಗೆ ಪೋಲಿಸರು ಬಂದು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. ಹಂತಕರ ಪತ್ತೆಗಾಗಿ ಎರಡು ವಿಶೇಷ ತಂಡಗಳನ್ನ ರಚಿಸಲಾಗಿದೆ. ಆರೋಪಿಗಳ ಸುಳಿಯು ಸಿಕ್ಕಿಂದು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಈಶಾನ್ಯ ವಿಭಾಗದ ಡಿಸಿಪಿ ಸಿ. ಕೆ. ಬಾಬಾ ವಿಶ್ವಾಸ ವ್ಯಕ್ತಪಡಿಸಿದರು.