ಶಿವಮೊಗ್ಗ: ಲಂಚ ಪಡೆಯುತ್ತಿದ್ದ ವೇಳೆಯೇ ಎಫ್ ಡಿಎ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಶಿವಮೊಗ್ಗ(Shivamogga) ಮಹಾನಗರ ಪಾಲಿಕೆ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಎಫ್ಡಿಎ ಅಧಿಕಾರಿ ಲೋಕಾಯುಕ್ತ (Lokayukta) ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಜನನ ಮತ್ತು ಮರಣ ನೋಂದಣಾಧಿಕಾರಿ ಕಚೇರಿಯಲ್ಲಿ ಎಫ್ಡಿಎ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗರಾಜ್ ಜನನ ಪ್ರಮಾಣ ಪತ್ರ ನೀಡುವುದಕ್ಕಾಗಿ 1 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
ಈ ಹಣ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಗಿರೀಶ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದು, ಹಣ ಪಡೆಯುವ ವೇಳೆಯೇ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.