ಬೆಂಗಳೂರು: ನಿರುದ್ಯೋಗಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದ್ದು, ಫೆ. 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಯುತ್ತಿದೆ.
ನಗರದ ಅರಮನೆ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಯುವ ಸಮೃದ್ಧಿ ಸಮ್ಮೇಳನ ನಡೆಯಲಿದೆ. 500ಕ್ಕೂ ಅಧಿಕ ಸಂಸ್ಥೆಗಳು ಅಥವಾ ಕಂಪನಿಗಳು ಭಾಗವಹಿಸಲಿವೆ. ಈಗಾಗಲೇ ಈ ಮೇಳಕ್ಕೆ ಉದ್ಯೋಗ ಹುಡುಕುತ್ತಿರುವ 31 ಸಾವಿರ ಜನ ನೋಂದಾಯಿಸಿಕೊಂಡಿದ್ದಾರೆ.
ಈ ಉದ್ಯೋಗ ಮೇಳವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಉದ್ಘಾಟಿಸಲಿದ್ದಾರೆ.
ಪದವಿ. ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ ಇನ್ನಿತರ ಉದ್ಯೋಗ ಆಧಾರಿತ ಕೋರ್ಸ್ ಗಳನ್ನು ಹೊಂದಿರುವವರು ಈ ಮೇಳದಲ್ಲಿ ಭಾಗವಹಿಸಬಹುದು. ಈ ಕುರಿತು ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್, ಐಟಿ-ಬಿಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.