ಸಿದ್ದಗಂಗಾ ಶ್ರೀಗಳಿಗೆ ಮರಣೋತ್ತರ ಭಾರತ ರತ್ನ ನೀಡಬೇಕು : ಎಂ ಬಿ ಪಾಟೀಲ್
ತುಮಕೂರು: ಭಾರತ ರತ್ನವನ್ನು ಮರಣೋತ್ತರವಾಗಿ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಅವರಿಗೆ ನೀಡಿದರೆ ಆ ಪ್ರಶಸ್ತಿಗೆ ಗೌರವ ಬರುತ್ತದೆ ಎಂದು ಶಾಸಕ ಎಂ. ಬಿ ಪಾಟೀಲ್ ಹೇಳಿದ್ದಾರೆ
ಶನಿವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಕುರಿತಾಗಿ ನಾವು ಹಿಂದೆ ಸಾಕಷ್ಟು ಬಾರಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದ್ದೇವೆ. ಸಿದ್ದಗಂಗಾ ಶ್ರೀಗಳಿಗೆ ಮರಣೋತ್ತರ ಭಾರತ ರತ್ನ ನೀಡುವುದರಿಂದ ಪ್ರಶಸ್ತಿಗೆ ಗೌರವ ಹೆಚ್ಚುತ್ತದೆ ಎಂದರು.
ಇನ್ನೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ವಾಮೀಜಿಗಳ ಪೇಟದ ಕುರಿತು ನೀಡಿದ ಹೇಳಿಕೆ ಕುರಿತು ಮಾತನಾಡಿ, ಸ್ವಾಮೀಜಿಗಳ ಪೇಟದ ಬಗ್ಗೆ ಸಿದ್ದರಾಮಯ್ಯ ನೀಡಿರುವ ಹೇಳಿಕೆಯನ್ನು ಸಾರ್ವಜನಿಕವಾಗಿ ತಪ್ಪಾಗಿ ಗ್ರಹಿಸಲಾಗಿದೆ. ಜಾತಿ, ಧರ್ಮದಲ್ಲಿ ಯಾವುದೇ ರೀತಿಯ ಭೇದಭಾವ ಕಾಣಬಾರದು. ಶ್ರೀಮಠದಲ್ಲಿ ಮುಸ್ಲಿಂ ಸಮುದಾಯದ ಮಕ್ಕಳೂ ಕೂಡ ವಿದ್ಯಾಭ್ಯಾಸ ಮಾಡಿದ್ದಾರೆ ಎಂದು ಹೇಳಿದರು.