ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆಯಿಂದ ಆರಂಭವಾದ ಮಳೆ ನಿರಂತರವಾಗಿ ಸುರಿಯುತ್ತಲೇ ಇದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಆಂತರಿಕ ಕರ್ನಾಟಕದಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಇದಕ್ಕೆ ಕಾರಣ ಫೆಂಗಲ್ ಸೈಕ್ಲೋನ್ ಹಾಗೆಯೇ ಮಂಗಳವಾರ ಕೂಡ ರಾಜ್ಯಾದ್ಯಾಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮತ್ತಷ್ಟು ಭಾರೀ ಮಳೆ ಆಗದಿದ್ದರೂ, ಕೆಲವೊಂದು ಕಡೆಗಳಲ್ಲಿ ಹೆಚ್ಚಿನ ಮಳೆಯನ್ನು ನಿರೀಕ್ಷಿಸಲಾಗಿದೆ.
ಹವಾಮಾನ ಇಲಾಖೆ ಈ ಬಗ್ಗೆ ಮುನ್ನೆಚ್ಚರಿಕೆಯನ್ನು ಹೊರಡಿಸಿದ್ದು, ಜನರು ಸುರಕ್ಷತೆಗಾಗಿ ಎಚ್ಚರಿಕೆಯಿಂದ ಇರಲು ಸಲಹೆ ನೀಡಲಾಗಿದೆ.








