ಮಂಡ್ಯ: ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಸ್ಕ್ಯಾನಿಂಗ್ ಸೆಂಟರ್ ಗಳನ್ನು ಸೀಜ್ ಮಾಡಲಾಗಿದೆ.
ಜಿಲ್ಲೆಯ ಆಲೆಮನೆಯಲ್ಲಿ (Alemane) ಭ್ರೂಣ ಪತ್ತೆ ಹಾಗೂ ಹತ್ಯೆ (Foeticide) ಪ್ರಕರಣ ಬೆಳಕಿಗೆ ಬಂದಿತ್ತು. ಹೀಗಾಗಿ ಅಲರ್ಟ್ ಆಗಿರುವ ಅಧಿಕಾರಿಗಳು ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಸೀಜ್ (Seize) ಮಾಡಲಾಗುತ್ತಿದೆ.
ಅಲ್ಲಿನ ಸಿಬ್ಬಂದಿ ಸಿಸ್ಟಮ್ ನಲ್ಲಿದ್ದ ಡೇಟಾ ಡಿಲೀಟ್ ಮಾಡಿ ಅಧಿಕಾರಿಗಳನ್ನು ಕಣ್ತಪ್ಪಿಸಲು ಯತ್ನಿಸಿದ್ದಾರೆ. ಭೇಟಿ ವೇಳೆ ಅಧಿಕಾರಿಗಳು ಸಿಸ್ಟಮ್ ಪರಿಶೀಲಿಸಿದ್ದಾರೆ. ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಧಿಕಾರಿಗಳಿಗೆ ಶಾಕ್ ಆಗಿದ್ದು, ಸ್ಕ್ಯಾನಿಂಗ್ ಮಾಡಿದ್ದ ಇಮೇಜ್ ಹಾಗೂ ಡೇಟಾ ಸಿಬ್ಬಂದಿಗಳು ಡಿಲೀಟ್ ಮಾಡಿರುವುದು ಕಂಡು ಬಂದಿದೆ.
ಹೀಗಾಗಿ ಕಾವೇರಿ ಹಾಗೂ ಲಕ್ಷ್ಮೀ ಡಯಾಗ್ನೋಸ್ಟಿಕ್ ಸೆಂಟರ್‌ಗಳಿಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಲಕ್ಷ್ಮೀ ಡಯಾಗ್ನೋಸ್ಟಿಕ್ ನಲ್ಲಿ 2 ವರ್ಷ ಹಾಗೂ ಕಾವೇರಿ ಸ್ಕ್ಯಾನಿಂಗ್ ನಲ್ಲಿ 3 ವರ್ಷಗಳ ಡೇಟಾ ಡಿಲೀಟ್ ಆಗಿವೆ ಎನ್ನಲಾಗಿದೆ. ಸದ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.








