ಬೆಂಗಳೂರು : ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ವಾಪಸ್ ಆಗಿದ್ದ ಕೆಪಿಸಿಸ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೆ ಜ್ವರ ಕಾಣಿಸಿಕೊಂಡಿದ್ದು, ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಕೊರೊನಾ ಗುಣಮುಖವಾದ ಬಳಿಕ ಜ್ವರ ಏಕೆ ಎಂಬ ಬಗ್ಗೆ ಪರಿಶೀಲಿಸಿ ಚಿಕಿತ್ಸೆ ನೀಡಿತ್ತಿದ್ದಾರೆ. ಡಿಕೆಶಿವಕುಮಾರ್ ಜ್ವರ ಮಾತ್ರ ಕಾಣಿಸಿಕೊಂಡಿದ್ದು ಬೇರೆ ಸಮಸ್ಯೆ ಇಲ್ಲ ಎಂದು ಮೂಲಗಳು ತಿಳಿಸಿವೆ.
ಡಿ.ಕೆ.ಶಿವಕುಮಾರ್ ಅವರಿಗೆ ಆಗಸ್ಟ್ 25ರಂದು ಜ್ವರ ಕಾಣಿಸಿಕೊಂಡ ಹಿನ್ನೆಲೆ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಧೃಢಪಟ್ಟಿತ್ತು. ಇದರಿಂದಾಗಿ ಸುಗುಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇತ್ತಿಚೆಗೆ ಆಸ್ಪತ್ರೆಯಿಂದ ಹೊರಬಂದಿದ್ದ ಡಿಕೆಶಿಗೆ ಬುಧವಾರ ಮತ್ತೆ ಜ್ವರ ಕಾಣಿಸಿಕೊಂಡಿದೆ.








