ಕೊರೊನಾ ಹೊಡೆತಕ್ಕೆ ಇಡಿ ವಿಶ್ವವೇ ತತ್ತರಿಸಿದೆ. ಕೋವಿಡ್ -19 ವೈರಸ್ ಹರಡುವಿಕೆ ತಡೆಯಲು ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಸಾಕಷ್ಟು ಜನ ಸ್ಟಾರ್ ನಟರು, ಬಿಸಿನೆಸ್ ಮ್ಯಾನ್ಸ್ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಸಹಾಯದ ಹಸ್ತ ಚಾಚಿವೆ. ಈ ಸಾಲಿಗೆ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಭಾರತ ಸೇವಾ ಸಂಸ್ಥೆ ಸೇರಿದೆ. ಇಂದು ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ಅವರನ್ನು ಭೇಟಿ ಮಾಡಿದ ಭಾರತ ಸೇವಾ ಸಂಸ್ಥೆಯ ಮುಖ್ಯಸ್ಥ ಶ್ರೀಕಾಂತ್ ದುಂಡಿಗೌಡರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಹಾಯ ಮಾಡಿದರು. ಈ ವೇಳೆ ಒಂದು ಲಕ್ಷ ರೂಪಾಯಿ ಚೆಕ್ ಅನ್ನು ಅವರು ಜಿಲ್ಲಾಧಿಕಾರಿಗಳಿಗೆ ತಲುಪಿಸಿದರು.
ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ
ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...








