ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ವಿರುದ್ಧ ಹೋರಾಡಿ : ಕಾರ್ಯಕರ್ತರಿಗೆ ಹೆಚ್ ಡಿಡಿ ಕರೆ

admin by admin
July 16, 2020
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಬಡವರ ವಿರೋಧಿಯಾಗಿ ಮತ್ತು ರೈತರ ವಿರೋಧಿಯಾಗಿ ತೆಗೆದುಕೊಂಡಿರುವ ನಿರ್ಧಾರಗಳ ವಿರುದ್ಧ ಪ್ರಚಾರ ಮಾಡಬೇಕು. ಜಾತ್ಯತೀತತೆ, ಸಾಮಾಜಿಕ ನ್ಯಾಯ, ಪ್ರಾದೇಶಿಕತೆ, ಇವುಗಳಿಗೆ ಹೇಗೆ ನಿಮ್ಮ ಪಕ್ಷ ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಅನಿವಾರ್ಯ ಎಂಬುದನ್ನು ತಿಳಿಸಿ ಹೇಳುವ ಕೆಲಸ ಮಾಡಬೇಕು ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ಪತ್ರದ ಮೂಲಕ ಕರೆ ಕೊಟ್ಟಿದ್ದಾರೆ.

ಹೆಚ್.ಡಿ ದೇವೇಗೌಡರ ಪತ್ರದಲ್ಲಿ..

Related posts

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

June 29, 2026
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

June 29, 2026

ಆತ್ಮೀಯರಾದ ಪಕ್ಷದ ನಿಷ್ಠಾವಂತ ನಾಯಕರುಗಳಿಗೆ,

ಇದು ನಿಮಗೆ ನಾನು ಬಹಳ ಯೋಚಿಸಿ ವೈಯಕ್ತಿಕವಾಗಿ ಬರೆಯುತ್ತಿರುವ ಪತ್ರ. 2018ರ ವಿಧಾನಸಭಾ ಚುನಾವಣೆಯಲ್ಲಿ ನೀವು ನಮ್ಮ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಿರಿ. ಪಕ್ಷದ ನಿಷ್ಠೆಗಾಗಿ ನೀವು ಪಕ್ಷ ಮಾಡಿರಬಹುದಾದ ಸಹಾಯವನ್ನೂ ಮೀರಿ ನಿಮ್ಮದೇ ಆದ ಸಂಪನ್ಮೂಲಗಳಿಂದ ಪಕ್ಷದ ಧ್ವಜವನ್ನು ಎತ್ತಿ ಹಿಡಿಯಲು ಹೋರಾಟ ಮಾಡಿದರ ಬಗ್ಗೆ ನಾನು ನಿಮಗೆ ಪಕ್ಷದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಆದರೂ ಆರ್ಥಿಕ ಸಂಕಷ್ಟಗಳ ಸವಾಲುಗಳ ಮಧ್ಯೆಯೇ ನೀವು ನಿಮ್ಮ ಕ್ಷೇತ್ರದಲ್ಲಿ ಪಕ್ಷದ ಪರವಾಗಿ ಕೆಲಸ ಮಾಡುತ್ತಾ ಬಂದಿದ್ದೀರಿ. 2019ರ ಲೋಕಸಭಾ ಚುನಾವಣೆಯಲ್ಲಿ ನೀವು ಕಾಂಗ್ರೆಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಉಂಟಾದ ವೈಪರೀತ್ಯಗಳು ಮತ್ತು ವಿರೋಧಾಭಾಸಗಳ ಮಧ್ಯದಲ್ಲೂ ನೀವು ಮುಜುಗರಕ್ಕೊಳಗಾದರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ಕೆಲಸ ಮಾಡಿದ್ದೀರಿ.

ಈಗ ವಿಧಾನಸಭಾ ಚುನಾವಣೆ ಮುಗಿದು ಎರಡೂವರೆ ವರ್ಷಗಳಾಗಿವೆ. ಇನ್ನು ಒಂದು ವರ್ಷದ ನಂತರ ಚುನಾವಣೆಯ ಬಿಸಿ ಆರಂಭವಾಗುತ್ತದೆ. ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷ ನಿಷ್ಠರಾಗಿ ಇಷ್ಟು ವರ್ಷ ನನ್ನೊಂದಿಗೆ ಕೆಲಸ ಮಾಡುತ್ತಾ ಬಂದಿರುವ ನಿಮ್ಮ ಭವಿಷ್ಯ ಉಜ್ವಲವಾಗಿರಬೇಕು ಎಂಬುದು ನನ್ನ ಅಪೇಕ್ಷೆ. ದುರದೃಷ್ಟವಶಾತ್ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಪಕ್ಷ ಪಾಲುದಾರ ಪಕ್ಷವಾಗಿ ನಮ್ಮ ಪಕ್ಷದ ಎಚ್.ಡಿ.ಕುಮಾರಸ್ವಾಮಿಯವರೇ ಮುಖ್ಯಮಂತ್ರಿಗಳಿದ್ದಾಗ್ಯೂ ನಿಮ್ಮಗಳ ಹಿತವನ್ನು ರಕ್ಷಿಸುವಲ್ಲಿ ನಾವು ಎಡವಿದ್ದೇವೆ ಮತ್ತು ತಪ್ಪು ಮಾಡಿದ್ದೇವೆಂಬುದನ್ನು ನಾನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಳ್ಳುತ್ತೇನೆ. ಹಾಗಾಗಿ ನೀವು ಅಷ್ಟರಮಟ್ಟಿಗೆ ನಿಮ್ಮ ಉತ್ಸಾಹ ಮತ್ತು ಸ್ಥೈರ್ಯವನ್ನು ಕಳೆದುಕೊಂಡಿರುವುದರಿಂದ ಅದು ಪಕ್ಷಕ್ಕೆ ಅಷ್ಟರಮಟ್ಟಿಗೆ ದೊಡ್ಡ ಹಾನಿಯನ್ನೇ ಮಾಡಿದೆ.

ಹೀಗೆ ಸ್ವಲ್ಪ ಮಂಕಾಗಿರುವ ಮತ್ತು ನಿಸ್ತೇಜವಾಗಿರುವ ಪಕ್ಷವನ್ನು ಇನ್ನು ಒಂದು ವರ್ಷ ಅವಧಿಯಲ್ಲಿ ಚುರುಕುಗೊಳಿಸಲೇ ಬೇಕಾಗಿದೆ. ಇದರ ಅನಿವಾರ್ಯತೆಯನ್ನು ನೀವು ಅರ್ಥ ಮಾಡಿಕೊಳ್ಳುತ್ತೀರೆಂದು ನಾನು ನಂಬಿದ್ದೇನೆ.

ದುರದೃಷ್ಟವಶಾತ್, ಜಗತ್ತೇ ಕೊರೊನಾ ಹೆಮ್ಮಾರಿಯಿಂದ ಕಂಗೆಟ್ಟಿದೆ. ಇದಕ್ಕೆ ನಮ್ಮ ರಾಜ್ಯವೂ ಹೊರತಾಗಿಲ್ಲ. ಲಾಕ್‌ಡೌನ್, ಸೀಲ್‌ಡೌನ್, ನಿಷೇಧ, ನಿರ್ಬಂಧ, ಇವುಗಳಿಂದಾಗಿ ನಮ್ಮ ವೈಯಕ್ತಿಕ ಚಟುವಟಿಕೆಗಳಷ್ಟೇ ಅಲ್ಲ ಪಕ್ಷದ ರಾಜಕಿಯ ಚಟುವಟಿಕೆಗಳೂ ಸ್ತಬ್ಧಗೊಂಡು ಸ್ಥಗಿತಗೊಂಡಿವೆ. ನಿಮ್ಮನ್ನು ಖುದ್ದಾಗಿ ಬರಮಾಡಿಕೊಂಡು ನಿಮ್ಮೊಂದಿಗೆ ನೇರವಾಗಿ ಮನಬಿಚ್ಚಿ ಮಾತನಾಡಬೇಕೆಂಬ ನನ್ನ ಆಲೋಚನೆಯನ್ನು ಅನುಷ್ಠಾನಕ್ಕೆ ತರಲು ಲಾಕ್‌ಡೌನ್ ಅಡ್ಡಿಯಾಯಿತು. ಹಾಗಾಗಿ ಈ ಪತ್ರ ಬರೆಯುವುದು ಅನಿವಾರ್ಯವಾಯಿತು. ಲಾಕ್‌ಡೌನ್ ಯಾವಾಗ ಮುಗಿಯುತ್ತದೋ ಹೇಳಲು ಬರುವಂತಿಲ್ಲ. ಕೊರೊನಾ ಪರಿಸ್ಥಿತಿ ಮತ್ತಷ್ಟು ತಿಂಗಳು ಮುಂದುವರಿಯುತ್ತದೋ ಗೊತ್ತಿಲ್ಲ. ಹಾಗೆಂದು ನಾವು ನೀವು ಕೈಕಟ್ಟಿಕೊಂಡು ಕುಳಿತುಕೊಳ್ಳಲು ಸಾಧ್ಯವಿಲ್ಲ.

ಆದುದರಿಂದ ನೀವು 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಟ್ಟಿಗಾದರೂ ಕ್ರಿಯಾಶೀಲರಾಗಿರಬೇಕು. ಕ್ಷೇತ್ರದಲ್ಲಿ ನಿರಂತರ ಜನಸಂಪರ್ಕವನ್ನು ಕಾಯ್ದುಕೊಂಡು ಬರಬೇಕು. ಜನಗಳ ಮಧ್ಯೆ ಇದ್ದೇನೆ ಎಂಬುದನ್ನು ತೋರಿಸಲು ಹೋಬಳಿ ಮಟ್ಟಗಳಲ್ಲಿ ಗ್ರಾಮ ಪಂಚಾಯತಿ ಮಟ್ಟಗಳಲ್ಲಿ ಒಂದಿಲ್ಲೊಂದು ಕಾರ್ಯಕ್ರಮ, ಚಟುವಟಿಕೆಗಳನ್ನು ಹಾಕಿಕೊಳ್ಳಬೇಕು. ಲಾಕ್‌ಡೌನ್ ಇರುವುದರಿಂದ ಜನರನ್ನೂ ಸೇರಿಸಿ ಕಾರ್ಯಕ್ರಮವನ್ನು ಮಾಡಲಾಗದಿದ್ದರೂ ಸಾಮಾಜಿಕ ಜಾಲತಾಣಗಳ ಮೂಲಕ ನಿಮ್ಮ ಅಸ್ತಿತ್ವ ಮತ್ತು ಕ್ರಿಯಾಶೀಲತೆಯನ್ನು, ಪಕ್ಷದ ಕಾರ್ಯಕರ್ತರಿಗೆ ಮತ್ತು ತನ್ಮೂಲಕ ನಿಮ್ಮ ಕ್ಷೇತ್ರದ ಮತದಾರರಿಗೆ ತಲುಪಿಸುವ ಕಾರ್ಯಕ್ಕೆ ನೀವು ಮುಂದಾಗಬೇಕು. ಕೊರೊನಾ ವಿಷಯದಲ್ಲಿ ಸರ್ಕಾರಿ ಕಾರ್ಯಕ್ರಮಗಳು ಒಂದು ಕಡೆಯಾದರೆ, ಪಕ್ಷದ ವತಿಯಿಂದ ಮತ್ತು ವೈಯಕ್ತಿಕವಾಗಿ ನೀವು ಈ ಸಂದರ್ಭದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತೀರಿ ಎಂಬ ಭಾವನೆ ಮೂಡುವಂತೆ ನಿಮ್ಮ ನಿಮ್ಮ ಕ್ಷೇತ್ರಕ್ಕೆ ಹೊಂದಿಕೆಯಾಗುವಂತಹ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು.

ಜೊತೆಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಬಡವರ ವಿರೋಧಿಯಾಗಿ ಮತ್ತು ರೈತರ ವಿರೋಧಿಯಾಗಿ ತೆಗೆದುಕೊಂಡಿರುವ ನಿರ್ಧಾರಗಳ ವಿರುದ್ಧ ಪ್ರಚಾರ ಮಾಡಬೇಕು. ಜಾತ್ಯತೀತತೆ, ಸಾಮಾಜಿಕ ನ್ಯಾಯ, ಪ್ರಾದೇಶಿಕತೆ, ಇವುಗಳಿಗೆ ಹೇಗೆ ನಿಮ್ಮ ಪಕ್ಷ ಎರಡು ರಾಷ್ಟ್ರೀಯ ಪಕ್ಷಗಳಿಗಿಂತ ಅನಿವಾರ್ಯ ಎಂಬುದನ್ನು ತಿಳಿಸಿ ಹೇಳುವ ಕೆಲಸ ಮಾಡಬೇಕು. ಉದಾಹರಣೆಗೆ ಭೂ ಸುಧಾರಣಾ ಕಾಯಿದೆಗೆ ಬಿಜೆಪಿ ಸರ್ಕಾರ ತಂದಿರುವ ತಿದ್ದುಪಡಿ ಹೇಗೆ ರೈತ ವಿರೋಧಿ ಮತ್ತು ಬಂಡವಾಳಶಾಹಿಗಳ ಪರ ಎಂಬುದನ್ನು ನಾವು ರೈತರಿಗೆ ಮತ್ತು ವಿದ್ಯಾವಂತ ತರುಣರಿಗೆ ಮನಗಾಣಿಸಿಕೊಡಬೇಕು. ಎಪಿಎಂಸಿ ತಿದ್ದುಪಡಿಯೂ ಅಷ್ಟೆ. ಹೇಗೆ ರೈತರಿಗೆ ಮಾರಕವಾಗಿದೆ ಎಂಬುದನ್ನು ಹೇಳಬೇಕು,. ಇತ್ತೀಚೆಗೆ ಕೇಂದ್ರ ಸರ್ಕಾರ ಶೈಕ್ಷಣಿಕ ಸಂಸ್ಥೆಗಳು ಮುಚ್ಚಿರುವ ಕಾರಣ ಪಠ್ಯವಿಷಯಗಳನ್ನು ಕಡಿಮೆಗೊಳಿಸುವ ನೆಪದಲ್ಲಿ ನಮ್ಮ ಸಂವಿಧಾನದ ಮೂಲ ಆಶಯಗಳಾದ ಜಾತ್ಯತೀತತೆ, ಸಾಮಾಜಿಕ ನ್ಯಾಯ, ಸಮಾನತೆ, ಜನತಂತ್ರ, ಮೊದಲಾದ ಮೂಲಭೂತ ಸಂಗತಿಗಳಿಗೆ ಕತ್ತರಿ ಹಾಕುವ ಪ್ರಯತ್ನಕ್ಕೆ ಮುಂದಾಗಿದೆ. ಇದು ಮುಂಬರುವ ದಿನಗಳಲ್ಲಿ ಸರ್ವಾಧಿಕಾರಿ ಆಡಳಿತಕ್ಕೆ ದಾರಿಯಾಗಬಹುದು. ಈ ಬಗ್ಗೆಯೂ ಜನಜಾಗೃತಿ ಮೂಡಿಸಬೇಕಾಗಿದೆ.

ಆದುದರಿಂದ ತಾವು ದಯವಿಟ್ಟು ಈ ವಿಷಯವನ್ನು ನಿಮ್ಮ ಭವಿಷ್ಯ ಮತ್ತು ಪಕ್ಷದ ಭವಿಷ್ಯ ಎರಡೂ ಅಡಗಿದೆ ಎಂಬುದನ್ನು ಅರ್ಥ ಮಾಡಿಕೊಂಡು ನಿಮ್ಮ ನಿಮ್ಮ ಕ್ಷೇತ್ರದಲ್ಲಿ ಚುರುಕಾಗಿ ಪಕ್ಷದ ಸಂಘಟನೆ, ಜನಸ್ಪಂದನೆ ಮತ್ತು ಜನಜಾಗೃತಿಯ ಜನಪರ ಕಾರ್ಯಕ್ರಮಗಳ ಬಗ್ಗೆ ಯೋಚಿಸಬೇಕೇಂದು ಹಾಗೂ ಕೊರೊನಾ ವಾತಾವರಣ ತಿಳಿಯಾಗುವವರೆಗೆ ಸಾಮಾಜಿಕ ಜಾಲತಾಣಗಳನ್ನು ಹೆಚ್ಚು ಹೆಚ್ಚು ಬಳಕೆ ಮಾಡಿಕೊಳ್ಳಬೇಕೆಂದು ನಾನು ಕೋರುತ್ತೇನೆ. ನನ್ನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತೀರೆಂಬ ವಿಶ್ವಾಸ ನನಗಿದೆ ಎಂದಿದ್ದಾರೆ.

Tags: h d devegoudaJDSkarnataka
ShareTweetSendShare
Join us on:

Related Posts

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

by Shwetha
June 29, 2026
0

ಚಿಕ್ಕಬಳ್ಳಾಪುರ: ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕಿಡಿಗೇಡಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹೊಸ ತಿರುವು ಪಡೆದಿದೆ. ಶಾಸಕರು...

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

by Shwetha
June 29, 2026
0

ಬೆಂಗಳೂರು: ಆರ್ ಎಸ್ ಎಸ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಸಮನ್ಸ್ ಗೆ ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಡಕ್...

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

by Shwetha
June 29, 2026
0

ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮರೆಯಾದರೆ ಮತ್ತೆ ಗುಲಾಮಗಿರಿ ಕಾಲಿಡುವುದು ನಿಶ್ಚಿತ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬರೂ ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram