ಬೀದರ್: ಕಾಲೇಜಿನಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಎರಡು ವಿದ್ಯಾರ್ಥಿಗಳ ಗುಂಪಿನ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಜಿಎನ್ ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಡನೆದಿದೆ. ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಸಂದರ್ಭದಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಅನ್ಯಕೋಮಿನ ಇನ್ನೊಂದು ಬಣ ದಾಳಿ ನಡೆಸಿದೆ ಎನ್ನಲಾಗಿದೆ. ಹಾಡು ಹಾಕುತ್ತಿದ್ದಂತೆ ಅನ್ಯ ಕೋಮಿನ ವಿದ್ಯಾರ್ಥಿಗಳು ಕೈಯಲ್ಲಿದ್ದ ಖಡ್ಗ ಹಾಗೂ ಕೈಯಿಂದ ವಿದ್ಯಾರ್ಥಿಗಳ ಮೇಲೆ ಮನ ಬಂದಂತೆ ದಾಳಿ ನಡೆಸಿದ್ದಾರೆ.
ಸದ್ಯ ಹಲ್ಲೆ ಮಾಡಿ ಪರಾರಿಯಾಗಿರುವ ಬಶೀರ್ ಖಾನ್, ಗಫರಾನ್, ಶೇಕ್ ಪಾಷಾ, ಬಿಲಾಲ್ ಸೇರಿದಂತೆ 17 ಕ್ಕೂ ಹೆಚ್ಚು ಅನ್ಯ ಗುಂಪಿನ ವಿದ್ಯಾರ್ಥಿಗಳ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ಹಲ್ಲೆಗೊಳಗಾಗಿರುವ ಕಾಲೇಜಿನ ವಿದ್ಯಾರ್ಥಿ ನಟರಾಜ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಎಪ್ ಐಆರ್ ದಾಖಲಿಸಿಕೊಂಡಿದ್ದಾರೆ.