ಬೆಂಗಳೂರು: ಮುಡಾ ಸೈಟ್ ಹಗರಣ (MUDA Scam) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಕೆಸರೆರಚಾಟ ಶುರುವಾಗಿದೆ. ಈ ಹಗರಣದ ಲಾಭ ಮಾಡಿಕೊಳ್ಳಲು ಹವಣಿಸುತ್ತಿರುವ ಬಿಜೆಪಿ – ಜೆಡಿಎಸ್ ದೋಸ್ತಿ ಪಾದಯಾತ್ರೆ ಮೂಲಕ ಮೈಸೂರು ಚಲೋ ಹಮ್ಮಿಕೊಂಡಿದೆ.
ಈ ಮಧ್ಯೆ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು (Private Complaint) ದಾಖಲಾಗಿದೆ.
ಸ್ನೇಹಮಯಿ ಕೃಷ್ಣ ಎಂಬುವರು ದೂರು ದಾಖಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ , ನಿಂಗಾ (ಜವರ) ಸೇರಿದಂತೆ ಹಲವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನಡೆಸಲಿದ್ದಾರೆ.
ಇಂದು ದಾಖಲೆಗಳ ಪರಿಶೀಲನೆ ನಡೆದಿದೆ. ಕೋರ್ಟ್ ಕೂಡ ಮತ್ತಷ್ಟು ವಾದಕ್ಕೆ ಅವಕಾಶ ನೀಡಿದೆ ಎಂದು ಸೂಚಿಸಿದೆ ಎಂದು ತಿಳಿದು ಬಂದಿದೆ.