ಸಿಎಂ ಭೇಟಿ ಮಾಡಿದ ಫಿಲಂ ಚೇಂಬರ್ ನಿಯೋಗ – ಚಿತ್ರಮಂದಿರ ತೆರೆಯಲು ಮನವಿ
ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ಹೇರಲಾಗಿದ್ದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಬಹುಇತೇಕ ಎಲ್ಲಾ ಚಟುವಟಿಗಳು ಎಂದಿನಂತೆ ಪುನರಾರಂಭವಾಗಿದೆ.. ಆದ್ರೆ ಇನ್ನೂವರೆಗೂ ಚಿತ್ರಮಂದಿರಗಳು ತೆರೆಯಲು ಅನುಮತಿ ಸಿಕ್ಕಿಲ್ಲ. ಈ ಹಿನ್ನೆಲೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಥಿಯೇಟರ್ ತೆರೆಯಲು ಅನುಮತಿಗೆ ಮನವಿ ಮಾಡಿದೆ.
ಫಿಲಂ ಚೇಂಬರ್ ಅಧ್ಯಕ್ಷ ಜೈರಾಜ್ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ ಸದಸ್ಯರು, ಚಿತ್ರಮಂದಿರಕ್ಕೆ ಅವಕಾಶ ಸೇರಿದಂತೆ ಒಳಾಂಗಣ ಚಿತ್ರೀಕರಣ, ಥಿಯೇಟರ್‌ಗಳ ವಿದ್ಯುತ್ ಶುಲ್ಕ, ನೀರಿನ ಶುಲ್ಕ ಮತ್ತು ಆಸ್ತಿ ತೆರಿಗೆಯಲ್ಲಿ ಸಂಪೂರ್ಣ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸಿಎಂ ಭೇಟಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಚಲನಚಿತ್ರ ಮಂದಿರಗಳನ್ನು ತೆರೆಯಲು ಅವಕಾಶ ಕೋರಿ ಸಿಎಂ ಭೇಟಿ ಮಾಡಿದ್ದೇವೆ. ಒಳಾಂಗಣ ಚಿತ್ರೀಕರಣಕ್ಕೂ ಅನುಮತಿ ಕೇಳಿದ್ದೇವೆ. ಸಿಎಂ ಉತ್ತಮವಾಗಿ ಸ್ಪಂದಿಸಿದ್ದಾರೆ. ಇನ್ನು 4-5 ದಿನಗಳಲ್ಲಿ ಚರ್ಚಿಸಿ ಬೇಡಿಕೆ ಈಡೇರಿಸುವುದಾಗಿ ಭರವಸೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.