ಸಿನಿಮಾರಂಗಕ್ಕೆ ಸಿಹಿ ಸುದ್ದಿ : ಜೂ. 21ರಿಂದ ಹೊರಾಂಗಣ ಚಿತ್ರೀಕರಣಕ್ಕೆ ಅನುಮತಿ – ಆದ್ರೆ ಷರತ್ತು ಅನ್ವಯ..!
ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ರಾಜ್ಯದಲ್ಲಿ ಹೇರಲಾಗಿದ್ದ ಲಾಕ್ ಡೌನ್ ಅನ್ನ ಕ್ರಮೇಣ ಸಡಿಲಿಕೆ ಮಾಡಲಾಗ್ತಿದೆ.. ಲಾಕ್ ಡೌನ್ ನಿಂದ ಚಿತ್ರರಂಗ ಸಂಪೂರ್ಣವಾಗಿ ನೆಲಕಚ್ಚಿತ್ತು.. ಆದ್ರೆ ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದು, ಸಿನಿಮಾರಂಗದ ಕಾರ್ಮಿಕರು..
ಇದೀಗ ರಾಜ್ಯದಲ್ಲಿ ಹೊರಾಂಗಣ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹೌದು ಜೂನ್ 21 ಅಂದ್ರೆ ಮುಂಬರುವ ಸೋಮವಾರದಿಂದ ರಾಜ್ಯದಲ್ಲಿ ಸಿನಿಮಾ, ಧಾರಾವಾಹಿ ಹಾಗೂ ಟಿವಿ ಕಾರ್ಯಕ್ರಮಗಳ ಚಿತ್ರೀಕರಣ ಮಾಡಬಹುದು ಎಂದು ಸಿಎಂ ಯಡಿಯೂರಪ್ಪನವರು ಘೋಷಣೆ ಮಾಡಿದ್ದಾರೆ. ಜೂನ್ 21 ರಿಂದ ಹೊರಾಂಗಣದಲ್ಲಿ ಶೂಟಿಂಗ್ ಮಾಡಬಹುದು, ಸೂಕ್ತ ಮುಂಜಾಗ್ರತೆ ಕ್ರಮ ಜರುಗಿಸಿಕೊಳ್ಳಬೇಕು ಎಂದು ಸಿಎಂ ಸೂಚನೆ ಕೊಟ್ಟಿದ್ದಾರೆ.
ಆದರೆ, ಚಿತ್ರಮಂದಿರಗಳ ಮೇಲಿನ ನಿರ್ಬಂಧ ಮುಂದುವರಿದೆ. ಥಿಯೇಟರ್ ತೆರೆಯಲು ಸರ್ಕಾರ ಅವಕಾಶ ಕೊಟ್ಟಿಲ್ಲ. ಜೂನ್ 21 ರಿಂದ ಜುಲೈ 5ರವರೆಗೂ ಈ ಆದೇಶ ಜಾರಿಯಲ್ಲಿದ್ದು, ಪರಿಸ್ಥಿತಿ ಅವಲೋಕಿಸಿ ಮುಂದಿನ ಬದಲಾವಣೆ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
6ನೇ ವಿವಾಹಕ್ಕೆ ತಯಾರಾಗಿದ್ದ ಸ್ವಯಂಘೋಷಿತ ಬಾಬಾ – ಕಾಮಪುರಾಣ ಬಿಚ್ಚಟ್ಟ 5ನೇ ಪತ್ನಿ
ಬಾಲಿವುಡ್ ನಲ್ಲಿ ಸಿನಿಮಾ ಮಾಡಿದ್ರೂ ಕನ್ನಡವೇ ತನ್ನ ಪ್ರಾಮುಖ್ಯತೆ.. ಕನ್ನಡಿಗರನ್ನ ರಂಜಿಸಲು ಹೆಚ್ಚು ಆಸೆ ಎಂದ ರಾಬರ್ಟ್ ಸುಂದರಿ..!
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








