Film Theaters : ಮತ್ತೆ ಕೊರೊನಾ ಭೀತಿ..!!! ಸಿನಿಮಾ ಮಂದಿರಗಳಲ್ಲಿ ಮಾಸ್ಕ್ ಕಡ್ಡಾಯ..!!
ಇದೀಗ ಮತ್ತೆ ಕೊರೊನಾ ಭೀತಿ ಶುರುವಾಗಿರುವ ಹಿನ್ನೆಲೆಯಲ್ಲಿ, ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಒಂದಷ್ಟು ಕಠಿಣ ಕ್ರಮಗಳನ್ನು ತಗೆದುಕೊಂಡಿದ್ದು, ಚಿತ್ರಮಂದಿರಗಳಿಗೆ ಹೋಗುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ‘ಚಿತ್ರಮಂದಿರಕ್ಕೆ ಹೋಗುವವರು ಮಾಸ್ಕ್ ಧರಿಸಲೇಬೇಕು. ಮಾಸ್ಕ್ ಹಾಕಿಕೊಳ್ಳದೇ ಚಿತ್ರಮಂದಿರಕ್ಕೆ ಬಂದರೆ, ಅವರಿಗೆ ಪ್ರವೇಶ ಅವಕಾಶ ನೀಡಬಾರದು ಎಂದು ಸೂಚಿಸಿದ್ದಾರೆ.