ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾದ ಪರಿಣಾಮ ಮಾರ್ಚ್ ನಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಆದರೆ ಲಾಕ್ ಡೌನ್ ಸಡಿಲಿಕೆಯಾದ ಬಳಿಕವೂ ಚಿತ್ರಮಂದಿರಗಳ ತೆರವಿಗೆ ಮಾತ್ರ ಅವಕಾಶ ಸಿಕ್ಕಿರಲಿಲ್ಲ. ಆದರೆ ಇದೀಗ ಶೀಘ್ರದಲ್ಲೇ ಥಿಯೇಟರ್ ಗಳು ಪುನಾರಂಭವಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಸಿಕ್ಕಿದೆ.
ಹೌದು ಅನ್ಲಾಕ್ 3 ರ ಅನ್ವಯ ಈಗಾಗಲೇ ಸಿನಿಮಾ ಮತ್ತು ಧಾರಾವಾಹಿ ಚಿತ್ರೀಕರಣಕ್ಕೆ ಕೇಂದ್ರ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಕಟ್ಟು ನಿಟ್ಟಿನ ಷರತ್ತುಗಳ ಜೊತೆಗೆ ಥಿಯೇಟರ್ ಗಳ ಓಪನ್ ಮಾಡುವುದಸಕ್ಕೂ ಕೇಂದ್ರ ಗ್ರೀನ್ ಸಿಗ್ನಲ್ ನೀಡಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಸೆಪ್ಟೆಂಬರ್ 15 ರಿಂದ ಥಿಯೇಟರ್ ಗಳು ಪುನಾರಂಭವಾಗಬಹುದು ಎಂದು ಹೇಳಲಾಗುತ್ತಿದೆ. ಇನ್ನೂ ಸ್ಯಾನಿಟೈಸರ್, ಕಡ್ಡಾಯವಾಗಿ ಮಾಸ್ಕ್ ಬಳಕೆ ಸೇರಿದಂತೆ ವಿವಿಧ ನಿಯಮಗಳನ್ನು ಪಾಲಿಸುವುದರೊಂದಿಗೆ ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ.