ಕೊಲೆ (Renukaswamy Murder Case) ಪ್ರಕರಣದ ಆರೋಪಿ ನಟ ದರ್ಶನ್ (Darshan) ಸೇರಿದಂತೆ 7 ಜನ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.
ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ 7 ಜನ ಆರೋಪಿಗಳಿಗೆ ಜಾಮೀನು ನೀಡಿದೆ. ನ್ಯಾ. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.11 ರಂದು ನಟ ದರ್ಶನ್ ಸೇರಿ ಹಲವರು ಬಂಧನಕ್ಕೊಳಗಾಗಿದ್ದರು. ಈ ಮಧ್ಯೆ ಜೈಲಿನಲ್ಲಿ ರಾಜಾತಿಥ್ಯದ ಆರೋಪದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಆನಂತರ ಅಲ್ಲಿ ಐಷಾರಾಮಿ ಜೀವನ ಸಾಗಿಸುತ್ತಿರುವುದು ಬೆಳಕಿಗೆ ಬರುತ್ತಿದ್ದಂತೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.
ಇತ್ತೀಚೆಗಷ್ಟೇ ಬೆನ್ನು ನೋವಿನ ಕಾರಣದಿಂದಾಗಿ ದರ್ಶನ್ ಬೇಲ್ ಮೇಲೆ ಹೊರ ಬಂದಿದ್ದರು. ಈಗಾಗಲೇ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಈ ಮಧ್ಯೆ ಬೇಲ್ ಸಿಕ್ಕಿರುವುದು ಸಂತಸ ತಂದಿದೆ.