ಕೊರೊನಾ ಸಂಕಷ್ಟ : 8 ಆರ್ಥಿಕ ನೆರವು ಘೋಷಿಸಿದ ಕೇಂದ್ರ ಸರ್ಕಾರ
ನವದೆಹಲಿ : ಕೊರೊನಾ ಸಂಕಷ್ಟ ಹಿನ್ನೆಲೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೊರೊನಾ ಸಂಕಷ್ಟದಿಂದ ತತ್ತರಿಸಿರುವ ಕ್ಷೇತ್ರಗಳಿಗೆ ವಿಶೇಷ ಆರ್ಥಿಕ ನೆರವು ಘೋಷಿಸಿದ್ದಾರೆ. ಕೊರೊನಾ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ರೂ. ತುರ್ತು ಅನುದಾನ ಘೋಷಣೆ ಮಾಡಲಾಗಿದೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೋವಿಡ್ -19 ಪೀಡಿತ ವಲಯಕ್ಕೆ ಪ್ರಮುಖ ಪರಿಹಾರವಾಗಿ 1.1 ಲಕ್ಷ ಕೋಟಿ ರೂ. ಮೀಸಲಿರಿಸಿರುವುದಾಗಿ ತಿಳಿಸಿದರು. ಇದರಲ್ಲಿ ಆರೋಗ್ಯ ಕ್ಷೇತ್ರಕ್ಕೆ 50,000 ಕೋಟಿ ರೂ. ಮತ್ತು ಇತರ ಕ್ಷೇತ್ರಗಳಿಗೆ ಹೆಚ್ಚುವರಿ 60,000 ಕೋಟಿ ರೂ. ನೀಡುವುದಾಗಿ ಹೇಳಿದ್ದಾರೆ.
ಇನ್ನುಳಿದಂತೆ ಹೆಚ್ಚುವರಿಯಾಗಿ 1.5 ಲಕ್ಷ ಕೋಟಿ ರೂ.ಗಳ ಸಾಲ ಖಾತರಿ ಯೋಜನೆ ಘೋಷಣೆ.
ಕ್ರೆಡಿಟ್ ಗ್ಯಾರಂಟಿ ಯೋಜನೆಯು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೂಲಕ 25 ಲಕ್ಷ ರೂ. ಸಾಲ.
ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಯೋಜನೆ ಘೋಷಿಸಲಾಗಿದ್ದು, ಈ ಯೋಜನೆಯಡಿ 11,000ಕ್ಕೂ ಹೆಚ್ಚು ಪ್ರವಾಸಿ ಗೈಡ್ ಗಳಿಗೆ ಶೇ 100ರಷ್ಟು ಖಾತರಿಯೊಂದಿಗೆ ಆರ್ಥಿಕ ನೆರವು. ಏಜೆನ್ಸಿಗೆ 10 ಲಕ್ಷ ರೂ., ಪ್ರವಾಸಿ ಗೈಡ್ ಗಳಿಗೆ 1 ಲಕ್ಷ ರೂ.ವರೆಗೆ ಸಾಲ.
ಭಾರತಕ್ಕೆ ಪ್ರಯಾಣವನ್ನು ಉತ್ತೇಜಿಸಲು 5 ಲಕ್ಷ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ. ಈ ಕ್ರಮಕ್ಕೆ ಒಟ್ಟು 100 ಕೋಟಿ ರೂ. ಮೀಸಲು.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ