ಬೆಳಗಾವಿ : ಜಿಲ್ಲೆಯಲ್ಲಿ ಕೊರೊನಾ ತಾಂಡವವಾಡುತ್ತಿದೆ.ಆದರೂ ಡಿಸಿಎಂ ಲಕ್ಷ್ಮಣ ಸವದಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಇನ್ನುಳಿದ ಮಂತ್ರಿಗಳು ಎಲ್ಲಿದ್ದಾರೆ ಎಂಬುದು ಗೊತ್ತಿಲ್ಲ. ಈ ಕಾರಣಕ್ಕೆ ಮಂತ್ರಿಗಳು ಎಲ್ಲಿದ್ದಾರೆ ಹುಡುಕಿಕೊಡಿ ಅಭಿಯಾನ ಆರಂಭಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಆದ್ರೆ ಬೆಳಗಾವಿಗೆ ಎಷ್ಟು ಪ್ರಾಮುಖ್ಯತೆ ನೀಡಬೇಕಿತ್ತೋ ಅಷ್ಟನ್ನು ಸರ್ಕಾರ ನೀಡಿಲ್ಲ. ಮಂತ್ರಿಗಳು ಜನರಿಗೆ ಸ್ಪಂದಿಸಿಲ್ಲ. ಬಹಳಷ್ಟು ಮಂತ್ರಿಗಳು ಇನ್ನೂ ಬೆಂಗಳೂರಿನಲ್ಲಿಯೇ ಇದ್ದಾರೆ. ತಮ್ಮ ಕ್ಷೇತ್ರಕ್ಕೂ ಬಂದಿಲ್ಲ, ತಮ್ಮ ಜಿಲ್ಲೆಗೂ ಬಂದಿಲ್ಲ. ಇದನ್ನೆಲ್ಲ ಜನತೆ ಗಮನಿಸುತ್ತಿದ್ದು, ಅವರೇ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಇನ್ನು ವಾರಕ್ಕೊಮ್ಮೆ ಸಭೆಯಾಗಬೇಕು. ಪ್ರತಿಪಕ್ಷದವರು, ಎನ್‌ಜಿಓಗಳು, ಜನರ ಸಲಹೆಯನ್ನು ಸರ್ಕಾರ ಪಡೆಯಬೇಕು. ಆದರೆ, ಮಂತ್ರಿಗಳು ಸರಿಯಾಗಿ ಜಿಲ್ಲೆಗೆ ಭೇಟಿ ನೀಡುತ್ತಿಲ್ಲ, ಸಭೆಯನ್ನೂ ನಡೆಸುತ್ತಿಲ್ಲ. ಇದಕ್ಕಾಗಿ ‘ಮಂತ್ರಿಗಳು ಎಲ್ಲಿದ್ದಾರೆ ಹುಡುಕಿಕೊಡಿ’ ಅಭಿಯಾನ ಆರಂಭಿಸಲಾಗುವುದು ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.