ರಸ್ತೆ ಬದಿ ನಿಲ್ಲಿಸಿದ್ದ ವರ್ಣರಂಜಿತ ಕಾರಿನಲ್ಲಿ ವ್ಯಕ್ತಿ ಶವ ಪತ್ತೆ….
1 min read
ರಸ್ತೆ ಬದಿ ನಿಲ್ಲಿಸಿದ್ದ ವರ್ಣರಂಜಿತ ಕಾರಿನಲ್ಲಿ ವ್ಯಕ್ತಿ ಶವ ಪತ್ತೆ….
ಬೆಂಗಳೂರು – ರಸ್ತೆ ಬದಿ ನಿಲ್ಲಿಸಿದ್ದ ಹಳೇ ಅಂಬಾಸಿಡರ್ ಕಾರೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮಾಗಡಿ ರಸ್ತೆ ಠಾಣೆ ವ್ಯಾಪ್ತಿಯ ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.
ಬಣ್ಣ ಬಣ್ಣದ ಚಿತ್ತಾರ ಬಿಡಿಸಿದ್ದ ಅಂಬಾಸಿಡರ್ ಕಾರಿನಲ್ಲಿ ಸುಮಾರು 45 ವ್ಯಕ್ತಿಯ ಶವ ಪತ್ತೆಯಾಗಿದೆ. ಕಾರಿನ ಬಳಿ ಕೆಟ್ಟ ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಸ್ಥಳೀಯರು ಕಾರಿನ ಬಾಗಿಲು ತೆರೆದು ನೋಡಿದಾಗ ಮೃತದೇಹ ಪತ್ತೆಯಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಗೋಪಿ ಎಂಬವವರಿಗೆ ಸೇರಿದ ಹಳೇ ಅಂಬಾಸಿಡರ್ ಕಾರನ್ನು ಕಳೆದ ಎರಡು ವರ್ಷಗಳಿಂದ ರಾಜಾಜಿನಗರ ಕೈಗಾರಿಕಾ ಪ್ರದೇಶದ ರಸ್ತೆ ಬದಿ ನಿಲುಗಡೆ ಮಾಡಲಾಗಿದೆ. ಕಾರಿಗೆ ವರ್ಣರಂಜಿತವ ಪೇಟಿಂಗ್ ಮಾಡಲಾಗಿದೆ. ಈ ಕಾರನ್ನು ಮೊದಲು ಸಿನಿಮಾ ಶೂಟಿಂಗ್ ಗಳಲ್ಲಿ ಬಳಕೆ ಮಾಡಲಾಗುತ್ತಿದೆ.
ಶವ ಕಾರಿನಲ್ಲಿ ಹೇಗೆ ಬಂತು ಎಂದು ತಿಳಿಯಲು ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ. ಸಾವಿನ ಕಾರಣ ತಿಳಿಯಲು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.