ಬೆಂಗಳೂರು : ಕೊರೊನಾ (Corona) ನಿಯಂತ್ರಿಸಲು ಸರ್ಕಾರ ದಂಡಂ ದಶಗುಣಂ ಸೂತ್ರಕ್ಕೆ ಮೊರೆ ಮೋಗಿದೆ. ಮಾಸ್ಕ್ (Mask) ಧರಿಸಿಲ್ಲ ಅಂದ್ರೆ ದುಬಾರಿ ದಂಡ ಹಾಕುತ್ತಿದೆ. ಇದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರವಾಗಿ (BBMP)ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ್ದು, ಕೊರೊನಾ (Corona) ನಿಯಂತ್ರಿಸಲು ದಂಡ ಅನ್ನೋದು ಕೊನೆಯ ಅಸ್ತ್ರ ಎಂದಿದ್ದಾರೆ.
ಯಾವುದೇ ಕಾರಣಕ್ಕೂ ದಂಡದ ಪ್ರಮಾಣವನ್ನು ಕಡಿಮೆ ಮಾಡುವುದಿಲ್ಲ. ಕೊರೊನಾ ನಿಯಂತ್ರಿಸಲು ದಂಡ ಅನ್ನೋದು ಕೊನೆಯ ಅಸ್ತ್ರ.
ಹೀಗಾಗಿ ಜನರೇ ಪಾಲನೆ ಮಾಡಬೇಕಾಗುತ್ತದೆ. ಮನೆಯಲ್ಲೇ ತಯಾರಿಸಿಕೊಂಡು ಮಾಸ್ಕ್ ಧರಿಸಬಹುದು. ಆದರೂ ಮಾಸ್ಕ್ ಧರಿಸದೇ ಪದೇ ಪದೇ ನಿಯಮ ಉಲ್ಲಂಘನೆ ಮಾಡುತ್ತಾರೆ.
ಅಂತಹವರು ದಂಡ ಕಟ್ಟಲಿ. ಕೊರೊನಾ ವ್ಯಕ್ತಿಯನ್ನ ಹಿಂಸಿಸುತ್ತದೆ. ಅಲ್ಲದೇ ಇದು ಜನರ ಸುತ್ತಮುತ್ತಲಿನವರಿಗೂ ಹರಡುತ್ತದೆ. ಹೀಗಾಗಿ ರಾಷ್ಟ್ರೀಯ ವಿಪತ್ತು ಅಡಿಯಲ್ಲಿ ಕ್ರಮ ತೆಗೆದುಕೊಂಡಿದ್ದೇವೆ.
ಇದನ್ನೂ ಓದಿ : ಮಾಸ್ಕ್ ಹಾಕಿ, ಇಲ್ಲಾಂದ್ರೆ ಕೊರೊನಾ ಟೆಸ್ಟ್, 50ಸಾವಿರ ದಂಡ, 3 ವರ್ಷ ಜೈಲು..!
ಯಾವುದೇ ಕಾರಣಕ್ಕೂ ದಂಡ ಇಳಿಸಲು ಸಾಧ್ಯವಾಗಲ್ಲ. 200 ರೂಪಾಯಿ ಇದ್ದಾಗ ಸಾಕಷ್ಟು ಜನ ನಿಯಮ ಉಲ್ಲಂಘಿಸುತ್ತಿದ್ದರು. ಇಂತಹ ಕೊರೊನಾ ಕಾಲದಲ್ಲಿ ಜನರು ಕೂಡ ಸಹಕಾರ ನೀಡಲೇಬೇಕು ಎಂದು ಬಿಬಿಎಂಪಿ ಕಮಿಷನರ್ ಹೇಳಿದರು.
ರಾಜ್ಯದಲ್ಲಿ ಕಳೆದ ಮೂರು ವಾರಗಳಿಂದ ಕೊರೊನಾ ತೀವ್ರತೆ ಶೇ.39ರಷ್ಟು ಹೆಚ್ಚಾಗಿದೆ. ಪ್ರತಿದಿನ ಕೊರೊನಾ ಸೋಂಕಿತರ ಸಂಖ್ಯೆ 10 ಸಾವಿರ ಆಸುಪಾಸು ಬರುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಧಾರಕ್ಕೆ ಬರಲಾಗಿದೆ.
ಈಗಿರುವ ಮಾಸ್ಕ್ ಧರಿಸವರಿಗೆ 1 ಸಾವಿರ ರೂ. ದಂಡದ ಜೊತೆಗೆ, ಮಾಸ್ಕ್ ಹಾಕಿಲ್ಲದಿದ್ದರೆ ಸ್ಥಳದಲ್ಲಿಯೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ.
ಕೊರೊನಾ ಟೆಸ್ಟ್ ಗೆ ಒಪ್ಪದಿದ್ದರೆ ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ 50 ಸಾವಿರ ದಂಡ ಹಾಗೂ 6 ತಿಂಗಳಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆ ಜಾರಿಗೆ ತಂದಿದೆ.
ಇದನ್ನೂ ಓದಿ : ದಿ.ಸುರೇಶ್ ಅಂಗಡಿ ಕುಟುಂಬಕ್ಕೆ ಸಿಎಂ ಬಿಎಸ್‍ವೈ ಸಾಂತ್ವನ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel