ಮಂಗಳೂರು : ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿ ಬೀದಿಯಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದ್ದ 54 ಮಂದಿ ವಿರುದ್ಧ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಎಫ್ ಐಆರ್ ದಾಖಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದು, 54 ಪ್ರಕರಣಗಳ ಪೈಕಿ 10 ಪ್ರಕರಣ ಪುತ್ತೂರು ತಾಲೂಕು ಹಾಗೂ ಉಳಿದ ಪ್ರಕರಣಗಳು ಮಂಗಳೂರು ತಾಲೂಕಿಗೆ ಸಂಬಂಧಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ವಾರಂಟೈನ್ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದ್ದು, ಪ್ರತಿಯೊಬ್ಬರ ಮೇಲೂ ನಿಗಾ ಇಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕ್ವಾರಂಟೈನ್ ನಿಗಾ ಕಾರ್ಯದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಕ್ವಾರಂಟೈನ್ ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.








