ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕಾಂಗ್ರೆಸ್ (Congress) ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಯತ್ನಾಳ್, ರಾಹುಲ್ ಗಾಂಧಿ ಹಾಗೂ ಧರ್ಮಗಳ ಬಗ್ಗೆ ಅವಹೇಳನ ಮಾಡಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಅವಹೇಳನಕಾರಿ ಪದ ಬಳಸಿದ್ದಾರೆ. ಹೀಗಾಗಿ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು ಸಲ್ಲಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.