ಭೋಪಾಲ್ ; ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರಿಗೆ ಸಂಬಂಧಿಸಿದಂತೆ ನಕಲಿ ವಿಡಿಯೋವನ್ನು ಬಿಡುಗಡೆ ಮಾಡಿದ ಆರೋಪದಡಿ ಮಧ್ಯಪ್ರದೇಶ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾನ್ ವಿರುದ್ಧ ಸೋಶಿಯಲ್ ಮೀಡಿಯಾಗಳಲ್ಲಿ ನಕಲಿ ವಿಡಿಯೋ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ಅಪರಾಧ ವಿಭಾಗದಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ವಿವಿಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಭೂಪಾಲ್ ಅಪರಾಧ ವಿಭಾಗದ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ದಿಗ್ವಿಜಯ್ ಸಿಂಗ್ ಟ್ವಿಟ್ಟರ್ ನಲ್ಲಿ ನಕಲಿ ವಿಡಿಯೋ ಹಾಕುವ ಮೂಲಕ ಶಿವರಾಜ್ ಸಿಂಗ್ ಚೌಹ್ಹಾಣ್ ಅವರ ವರ್ಚಸ್ಸನ್ನು ಕುಗ್ಗಿಸಲು ಯತ್ನಿಸಲಾಗಿದೆ ಎಂದು ದೂರಿನಲ್ಲಿ ಬಿಜೆಪಿ ನಾಯಕರು ಉಲ್ಲೇಖಿಸಿದ್ದಾರೆ.