shivamurthy murugha sharanaru | ಮುರುಘಾ ಮಠದ ಶ್ರೀಗಳಿಗೆ ಮತ್ತೊಂದು ಸಂಕಷ್ಟ- murugha mata
ಮೈಸೂರು : ಚಿತ್ರದುರ್ಗ ಮುರುಘಾ ಮಠದ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಜರಾಬಾದ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
ನಿನ್ನೆ ತಡರಾತ್ರಿ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಶ್ರೀಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಈ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗುವ ಸಾಧ್ಯತೆಗಳಿವೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.