ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ FIR Prashant Sambaragi
ಬೆಂಗಳೂರು : ಕ್ರೈಸ್ತ ಸಮುದಾಯಕ್ಕೆ ಹಾಗೂ ಡಿಕೆ ಶಿವಕುಮಾರ್ ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರು ದಕ್ಷಿಣ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಪ್ರಶಾಂರ್ ಸಂಬರಗಿ ವಿರುದ್ಧ ಕೋಮುಭಾವನೆ ಕೆರಳಿಸುವ ಪೋಸ್ಟ್ ಹಾಕಿರುವ ಆರೋಪ ಕೇಳಿಬಂದಿದೆ.
ಪ್ರಶಾಂತ್ ಸಂಬರಗಿ ಕ್ರಿಸ್ ಮಸ್ ವೇಳೆಯಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವಹೇಳನಕಾರಿ ಪೋಸ್ಟ್ ಮಾಡಿದ್ದರಂತೆ. ಈ ಹಿನ್ನೆಲೆಯಲ್ಲಿ ಸಂಬರಗಿ ವಿರುದ್ಧ ವಕೀಲ ಸಿ. ಲಕ್ಷ್ಮೀ ನಾರಾಯಣ ದೂರು ನೀಡಿದ್ದಾರೆ.
ವಕೀಲ ಸಿ. ಲಕ್ಷ್ಮೀ ನಾರಾಯಣ ದೂರಿನ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.









