ಮಂಡ್ಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ನಾಗಮಂಗಲ ಕೋಮುಗಲಭೆ (Nagamangala Violence) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ವಿಡಿಯೋ ಹಾಗೂ ಫೋಟೋ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ದೊಂಬಿ ಗಲಭೆಗೆ ಪ್ರಚೋದನೆ ಆರೋಪಡಿ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಶೋಭಾ ಕರಂದ್ಲಾಜೆ ಅವರು, ಕಲ್ಲು ತೂರಿ, ಬೆಂಕಿ ಹಚ್ಚಿದವರನ್ನ ರಕ್ಷಿಸಿ, ಗಣೇಶನನ್ನು ಬಂಧಿಸಲಾಗಿದೆ ಎಂದು ಪೋಸ್ಟ್ ಮಾಡಿದ್ದರು. ಅಲ್ಲದೇ, ಆರ್. ಅಶೋಕ್, ನಾಗಮಂಗಲ ಘಟನೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆಂದು ಪೋಸ್ಟ್ ಹಾಕಿದ್ದರು. ಹೀಗಾಗಿ ಅಶೋಕ್ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.