ಬೆಂಗಳೂರು: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha), ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವು ಬೆಂಬಲಿಗರ ವಿರುದ್ಧ ಎಫ್ ಐಆರ ದಾಖಲಿಸಲಾಗಿದೆ.
ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು. ಗುಂಪುಗೂಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಪುನೀತ್ ಕೆರೆಹಳ್ಳಿ ಎ1, ಪ್ರತಾಪ್ ಸಿಂಹ ಎ2 ಆರೋಪಿಗಳು ಎಂದು ಉಲ್ಲೇಖಿಸಲಾಗಿದೆ.
ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ಸೇರಿದಂತೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಇಂದು ಪ್ರತಿಭಟನೆ ನಡೆಸಿದ್ದರು. ಮಾಂಸ ಸಾಗಾಟಕ್ಕೆ ತಡೆ ಪ್ರಕರಣದಲ್ಲಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿಗೆ ಲಾಕಪ್‌ನಲ್ಲಿ ಬಟ್ಟೆ ಬಿಚ್ಚಿಸಿ ಪೊಲೀಸರು ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗಿತ್ತು.








