ರಾಯ್ಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಮೂರು ಎಫ್ ಐಆರ್ ದಾಖಲಾಗಿವೆ.
ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಸಿಖ್ಖರ ಕುರಿತು ನೀಡಿದ ಹೇಳಿಕೆ (Sikh sentiments) ನೀಡಿದ್ದನ್ನು ಖಂಡಿಸಿ, ಛತ್ತೀಸ್ ಗಢದ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ.
ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್ ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲೊಂದು ಪ್ರಕರಣ ದಾಖಲಾಗಿದೆ. ಬಿಎನ್ ಎಸ್ ಸೆಕ್ಷನ್ 299 ಮತ್ತು 302ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಛತ್ತೀಸ್ಗಢದ ಬಿಜೆಪಿ (BJP) ವಕ್ತಾರ ಅಮರ್ ಜೀತ್ ಸಿಂಗ್ ಛಾಬ್ರಾ, ರಾಹುಲ್ ಹೇಳಿಕೆಯೂ ಸಿಖ್ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ರಾಯ್ಪುರದಲ್ಲಿ ಒಂದು ದೂರು ದಾಖಲಿಸಲಾಗಿದೆ.
ದೇಶದಲ್ಲಿ ಸಿಬ್ಬರಿಗೆ ಪಗಡಿ ಅಥವಾ ಕಡಾ ಧರಿಸಲು ಹಾಗೂ ಗುರುದ್ವಾರಕ್ಕೆ ಹೋಗಲು ಅನುಮತಿ ನೀಡುತ್ತಾರೆಯೇ? ಎಂದು ರಾಹುಲ್ ಗಾಂಧಿ ಅಮೆರಿಕದಲ್ಲಿ ಹೇಳಿಕೆ ನೀಡಿರುವುದಾಗಿ ವಿವರಿಸಲಾಗಿದೆ. ಭಾರತ ಸೇರಿದಂತೆ ಇಡೀ ಪ್ರಪಂಚದಲ್ಲೇ ಸಿಖ್ ಸಮುದಾಯದವರು ಪಗಡಿ ಮತ್ತು ಕಡಾ ಧರಿಸಿ ಗುರುದ್ವಾರ ಪ್ರವೇಶಿಸುತ್ತಾರೆ. ಪ್ರಧಾನಿ ಕೂಡ ಪಗಡಿ ಮತ್ತು ಕಡಾ ಧರಿಸಿಯೇ ಗುರುದ್ವಾರಕ್ಕೆ ಭೇಟಿ ನೀಡುತ್ತಾರೆ ಎಂದು ಹೇಳಿದ್ದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಖ್ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ ಎದು ದೂರು ದಾಖಲಿಸಲಾಗಿದೆ.