ಸಂಜನಾ ಗಲ್ರಾನಿಗೆ ಮತ್ತೊಂದು ಸಂಕಷ್ಟ – ವಿಸ್ಕಿ ಎರಚಿ ಹಲ್ಲೆ ಮಾಡಿದ ಆರೋಪ – FIR ದಾಖಲು
ಬೆಂಗಳೂರು : ಇತ್ತೀಚೆಗಷ್ಟೇ ಸ್ಯಾಂಡಲ್ ವುಡ್ ಡ್ರಗ್ ಕೇಸ್ ನಲ್ಲಿ ಸಿಲುಪಿ ಪರ್ಪನ ಅಗ್ರಹಾರದಲ್ಲಿ ಸೆರೆವಾಸ ಅನುಭವಿಸಿ ಜಾಮೀನಿನ ಮೇಲೆ ಸಂಜನಾ ಗಲ್ರಾನಿ ಹೊರಬಂದಿದ್ಧಾರೆ. ಇದೀಗ ಮತ್ತೊಮ್ಮೆ ವಿಸ್ಕಿ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ.. ಹೌದು.. ವಿಸ್ಕಿ ಎರಚಿ ಹಲ್ಲೆ ಮಾಡಿದ್ದು. ಹೌದು.. ವಿಸ್ಕಿ ಎರಚಿ ಹಲ್ಲೆ ಮಾಡಿರುವುದಾಗಿ ಆರೋಪಿಸಿ FIR ದಾಖಲಿಸಿದ್ದಾರೆ. ಬೆಂಗಳೂರಿನ ಕಬ್ಬನ್ಪಾರ್ಕ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ರೂಪದರ್ಶಿಯಾಗಿರುವ ವಂದನಾ ಜೈನ್ ಎಂಬಾಕೆ ನೀಡಿದ್ದ ದೂರಿನನ್ವಯ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಅಂದ್ಹಾಗೆ ಇದು ಇತ್ತೀಚೆಗಿನ ಪ್ರಕರಣ ಅಲ್ಲ. ದಿಉ ಹಳೆಯ ಗಲಾಟೆ ಎನ್ನಲಾಗಿದೆ. 2019ರಲ್ಲಿ ಲ್ಯಾವೆಲ್ಲೆ ರಸ್ತೆಯ ಕ್ಲಬ್ ವೊಂದರಲ್ಲಿ ಈ ಗಲಾಟೆ ನಡೆದಿತ್ತು ಎನ್ನಲಾಗಿದೆ. ವಂದನಾ ಹಾಗೂ ಸಂಜನಾ ನಡುವೆ ಗಲಾಟೆ ನಡೆದಿದ್ದು, ವಂದನಾ ಸ್ನೇಹಿತನ ಜತೆ ಸೇರಿ ಆಕೆಯ ವಿರುದ್ಧವೇ ಅವಹೇಳನಕಾರಿಯಾಗಿ ಸಂಜನಾ ಮಾತನಾಡಿದ್ದರು ಎನ್ನಲಾಗಿದೆ.. ಅಲ್ಲದೇ ಸಂಜನಾ ತನಗೆ ವಿಸ್ಕಿ ಎರಚಿ ಹಲ್ಲೆ ಮಾಡಿ, ಕಣ್ಣಿಗೂ ಗಾಯ ಮಾಡಿದ್ದರು ಎಂದು ವಂದನಾ ದೂರು ನೀಡಿದ್ದರು.
ಅಲ್ಲದೇ ಸಂಜನಾ ಈ ಘಟನೆ ನಡೆದ ಬಳಿಕ ಬೆದರಿಕೆಯನ್ನೂ ಹಾಕಿದ್ದರು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ನೀಡಿದ ಸೂಚನೆ ಮೇರೆಗೆ ಪೊಲೀಸರು ಸಂಜನಾ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಅಂದ್ಹಾಗೆ ಇತ್ತೀಚೆಗೆ ಸಂಜನಾ ಕೊರೊನಾ ಸಂಕಷ್ಟದ ಸಮಯದಲ್ಲಿ ಬಡವರಿಗೆ ಸಹಾಯ ಮಾಡುತ್ತಿದ್ದಾರೆ. ಸಮಾಜ ಸೇವೆಯಲ್ಲಿ ತೊಡಗಿದ್ದು, ಬಡವಿರಿಗೆ ದಿನಸಿ ಆಹಾರದ ಕಿಟ್ ಬವಿತರಣೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವಿಡಿಯೋಗಳನ್ನ ಹಂಚಿಕೊಂಡಿದ್ದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.