ಕನ್ನಡದ ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಬೃಂದಾವನ’ ಸೀರಿಯಲ್ ನಟ ವರುಣ್ ಆರಾಧ್ಯ (Varun Aradhya) ವಿರುದ್ಧ ಯುವತಿಯೊಬ್ಬರು ಲೈಂಗಿಕ ದೌರ್ಜನ್ಯ ಹಾಗೂ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಕುರಿತು ಆರೋಪಿಸಿ ಬಸವೇಶ್ವರ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಖಾಸಗಿ ವಿಡಿಯೋ ಮತ್ತು ಖಾಸಗಿ ಫೋಟೋವನ್ನು ಸಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿರುವುದಾಗಿ ಯುವತಿ ಆರೋಪಿಸಿದ್ದಾರೆ.
ಆರೋಪಿ ವರುಣ್ ಯುವತಿ ಜೊತೆ ಎಂಗೇಜ್ ಆಗಿದ್ದಾಗಲೇ ಬೇರೆ ಯುವತಿಯೊಂದಿಗೆ ಅಫೇರ್ ಹೊಂದಿದ್ದ ಎನ್ನಲಾಗಿದ್ದು, ಅದನ್ನು ಪ್ರಸ್ನಿಸಿದ ಯುವತಿಗೆ ಖಾಸಗಿ ಫೋಟೋ, ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ಬೆದರಿಸಿದ್ದ. ಮುಂದೆ ಬೇರೆಯವರನ್ನು ಮದುವೆಯಾದರೆ, ಅವನನ್ನು ಸಾಯಿಸಿ ನಿನ್ನನ್ನು ಸಾಯಿಸುತ್ತೇನೆ ಬೆದರಿಸಿದ್ದಾರೆ. ಖಾಸಗಿ ಫೋಟೋ ಕಳುಹಿಸಿ ಅವಾಚ್ಯ ಪದಗಳಿಂದ ವರುಣ್ ನಿಂದಿಸಿರುವುದಾಗಿ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.