ತುಮಕೂರು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿದ್ದ ಕೃಷಿ ಮಸೂದೆಗಳನ್ನ ವಿರೋಧಿಸಿದ್ದ ರೈತರನ್ನು ಉಗ್ರರು ಎಂದು ಟೀಕಿಸಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್‍ಐಆರ್(Kangana Ranaut Fir lodged) ದಾಖಲಾಗಿದೆ.
ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ (ಯು/ಎಸ್ -44), 108, 153, 153ಎ, 504 ಅನ್ವಯ ಎಫ್‍ಐಆರ್ ದಾಖಲಾಗಿದೆ.
ಅ.12ರಂದು ತುಮಕೂರಿನ ಜೆಎಂಎಫ್‍ಸಿ ನ್ಯಾಯಾಲಯ ಕಂಗನಾ ರಣಾವತ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಆದೇಶ ನೀಡಿತ್ತು. ಕ್ಯಾತ್ಸಂದ್ರ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್‍ಗೆ ಎಫ್‍ಐಆರ್ ದಾಖಲು ಮಾಡಿಕೊಳ್ಳುವಂತೆ ಸೆಕ್ಷನ್ 156(3) ರ ಅಡಿ ಕೋರ್ಟ್ ಸೂಚನೆ ನೀಡಿತ್ತು. ಕೋರ್ಟ್ ಆದೇಶದ ಮೇರೆಗೆ ಎಫ್‍ಐಆರ್ ದಾಖಲು ಮಾಡಲಾಗಿದೆ.

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಕರ್ನಾಟಕ, ಪಂಜಾಬ್, ಹರಿಯಾಣ ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನ ಭಯೋತ್ಪಾದಕರಿಗೆ ಹೋಲಿಕೆ ಮಾಡಿ ನಟಿ ಕಂಗನಾ ರಣಾವತ್ ಟ್ವೀಟ್ ಮಾಡಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಂಗನಾ ವಿರುದ್ಧ ತುಮಕೂರು ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ವಕೀಲ ಹಾಗೂ ರೈತರು ಆದ ರಮೇಶ್ ನಾಯ್ಕ ದೂರು ದಾಖಲಿಸಿದ್ದರು.

ಸಿಎಎ ವಿರುದ್ಧ ತಪ್ಪು ಮಾಹಿತಿ, ಊಹಾಪೋಹಗಳನ್ನು ಹಂಚಿ ದೇಶದಲ್ಲಿ ಗಲಭೆ ಸೃಷ್ಟಿಸಿದ ಜನರೇ ಇಂದು ಕೃಷಿ ಮಸೂದೆಗಳ ಬಗ್ಗೆ ಸಲ್ಲದ ಮಾಹಿತಿಗಳನ್ನು ಹಂಚುತ್ತಿದ್ದಾರೆ. ಇವರು ಭಯೋತ್ಪಾದಕರು’ ಎಂದು ಕಂಗನಾ ಟ್ವೀಟ್ ಮಾಡಿದ್ದರು. ಈ ಮೂಲಕ ಕಂಗನಾ, ದುರುದ್ದೇಶದಿಂದ ದೇಶದಲ್ಲಿ ಕೃಷಿ ಸಂಬಂಧಿತ ವಿಧೇಯಕಗಳನ್ನು ವಿರೋಧಿಸುತ್ತಿರುವ ರೈತರನ್ನು ಭಯೋತ್ಪಾದಕರೆಂದು ನಿಂದಿಸಿದ್ದಾರೆ.
ಇದು ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಉದ್ದೇಶದಿಂದ ಹಾಗೂ ದೊಂಬಿಗೆ ಪ್ರಚೋದನೆ ನೀಡುವ ಹೇಳಿಕೆಗಳನ್ನು ಅವರು ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ರಮೇಶ್ ನಾಯ್ಕ್ ದೂರು ನೀಡಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








